ಕ್ರೈಂ ಸ್ಟೋರಿಸಿನಿಮಾಸುದ್ದಿ
ಮೂರನೇ ಬಾರಿ ದರ್ಶನ್ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಆರು ಆರೋಪಿಗಳನ್ನು ಕೋರ್ಟ್ ಮೂರನೇ ಬಾರಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಇಂದು ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್ ಮತ್ತು ಗ್ಯಾಂಗ್ ಸದಸ್ಯರು ಎಸಿಎಂಎಂ ಕೋರ್ಟ್ಗೆ ಹಾಜರು ಪಡಿಸಿದರು.
ಹತ್ಯೆ ಪ್ರಕರಣದಲ್ಲಿ ಸ್ಥಳ ಮಹಜರು, ಸಾಕ್ಷ್ಯ ಸಂಗ್ರಹ ಪ್ರಕ್ರಿಯೆಗಳು ಈ ವಾರ ಮತ್ತು ಕಳೆದ ವಾರ ನಡೆದಿತ್ತು. ಬಹುತೇಕ ಪ್ರಕ್ರಿಯೆಗಳು ಮುಕ್ತಾಯವಾದರೂ ದರ್ಶನ್, ವಿನಯ್, ಪ್ರದೂಶ್, ನಾಗರಾಜ್, ಲಕ್ಷ್ಮಣ್, ಧನರಾಜ್ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕೆಂದು ಎಸ್ಪಿಪಿ ವಾದ ಮಂಡಿಸಿದರು. ಈ ವಾದವನ್ನು ಪುರಸ್ಕರಿಸಿದ ಕೋರ್ಟ್ ಮತ್ತೆ ದರ್ಶನ್ ಮತ್ತು ಉಳಿದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿತು.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com




