ಬೆಂಗಳೂರು: ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಇಂದು ವಜಾಗೊಳಿಸಿದೆ.
ಮಾಧ್ಯಮದವರ ಜತೆ ಡಿಕೆ ಶಿವಕುಮಾರ್ ಅವರು ಮಾತನಾಡಿ, ಮುಖ್ಯಮಂತ್ರಿಗಳ ವಿರುದ್ಧ ಬಂದಿರುವ ತೀರ್ಪಿನ ಕುರಿತಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಇದು ಬಿಜೆಪಿಯವರು ಮಾಡುತ್ತಿರುವ ಷಡ್ಯಂತ್ರ, ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ, ಸರ್ಕಾರ ಜನರಿಗೆ ಕೊಡುತ್ತಿರುವ ಕೊಡುಗೆಗಳನ್ನು ಸಹಿಸಿಕೊಳ್ಳಲಾಗದೆ ಈ ರೀತಿಯ ಷಡ್ಯಂತ್ರ ಮಾಡುತ್ತಿದ್ದಾರೆ, ಮುಖ್ಯಮಂತ್ರಿಗಳು ತುಂಬಾ ಕ್ಲೀನಾಗಿ ಹೊರಬರಲಿದ್ದಾರೆ ಎಂದು ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಹೇಳಿದ್ದಾರೆ


