ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಗುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ತೆಲುಗು ಚಿತ್ರ ನಟಿ ಹೇಮಾರನ್ನು ಮತ್ತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಡ್ರಗ್ಸ್ ಪಾರ್ಟಿಯಲ್ಲಿ ಭಾಗವಹಿಸಿದ್ದ ನೂರಕ್ಕೂ ಹೆಚ್ಚು ಜನರ ರಕ್ತ ಪರೀಕ್ಷೆ ವೇಳೆ 86 ಮಂದಿ ಡ್ರಗ್ಸ್ ಸೇವಿಸಿರುವುದು ಪತ್ತೆಯಾಗಿತ್ತು. ಈ ಸಂಬಂಧ ಈಗಾಗಲೇ ಐವರನ್ನು ಬಂಧಿಸಿದ್ದು, ಪಾರ್ಟಿಯಲ್ಲಿದ್ದ ಪ್ರಮುಖರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ
ಮೊದಲ ದಿನವೇ ನಾನು ಘಟನೆ ನಡೆದ ಸ್ಥಳದಲ್ಲಿ ಇರಲಿಲ್ಲ ಎಂದು ಸುಳ್ಳು ಹೇಳಿದ್ದ ಹೇಮಾ ನಂತರ ಪೊಲೀಸರಿಗೆ ಹೆಸರು, ವಿಳಾಸ ತಪ್ಪು ವಿವರ ನೀಡಿ ತನಿಖೆ ದಾರಿ ತಪ್ಪಿಸಲು ನೋಡಿದ್ದರು. ವಿಚಾರಣೆಗೆ ಕರೆದಾಗಲೂ ಕೂಡ ಅನಾರೋಗ್ಯ ಸಮಸ್ಯೆ ನೆಪದಲ್ಲಿ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಕೊನೆಗೆ ಎರಡು ದಿನಗಳ ಹಿಂದೆ ವಿಚಾರಣೆಗೆ ಬಂದ ವೇಳೆ ಸಿಸಿಬಿ ಪೊಲೀಸರು ಬಂಧಿಸಿದ್ದರು.
ಸ್ ವಿಚಾರಣೆ ಸಂದರ್ಭದಲ್ಲಿ ಹೇಮಾ ಹಲವು ಡ್ರಗ್ಸ್ ಪಾರ್ಟಿಗಳಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. ಅಷ್ಟೇ ಅಲ್ಲದೇ ಕೆಲ ಪೆಡ್ಲರ್‌ಗಳ ಜೊತೆಗೂ ಸಂಪರ್ಕ ಹೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಫಾರ್ಮ್ ಹೌಸ್‌ನಲ್ಲಿ ಬರೇ ಡ್ರಗ್ಸ್ ಪಾರ್ಟಿ ಮಾತ್ರ ಅಲ್ಲದೇ ಕೆಲವೊಂದು ಅಕ್ರಮ ಚಟುವಟಿಕೆಗಳು ಕೂಡ ನಡೆದಿರುವ ಬಗ್ಗೆ ಸಿಸಿಬಿಗೆ ಮಾಹಿತಿ ಲಭ್ಯವಾಗಿದೆ.
ಆಗಮಿಸಿದ ಯುವತಿಯರಿಗೆ ಅಲ್ಲಿ ಪರಿಚಯವೇ ಇರಲಿಲ್ಲ. ಅಷ್ಟೇ ಅಲ್ಲದೇ ಲಕ್ಷಾಂತರ ರೂ. ಪತ್ತೆಯಾಗಿರುವುದು ಹಲವು ಅನುಮಾಗಳಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಆನೇಕಲ್ ಜಿಲ್ಲಾ ಕೋರ್ಟ್ ಮುಂದೆ ಹೇಮಾ ಅವರನ್ನು ಹಾಜರುಪಡಿಸಿದ್ದ ಸಿಸಿಬಿ ಪೊಲೀಸರು ಈ ಸಂಬಂಧ ಕೆಲ ದಾಖಲೆಗಳು, ವಿಚಾರಣೆಯಲ್ಲಿ ಸಿಕ್ಕ ಮಾಹಿತಿಯನ್ನು ಕೋರ್ಟ್ ಮುಂದಿಟ್ಟು ಇನ್ನೂ ಎರಡು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com


