ಬೆಂಗಳೂರು: ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬಳ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಜಮ್ಮ(50) ಮೃತ ಮಹಿಳೆ. ಮೃತ ಮಂಜಮ್ಮ ಮೈದುನ ಶಿವರಾಮ ಅವರ ದೂರು ಆಧರಿಸಿ ಕರ್ತವ್ಯ ನಿರ್ಲಕ್ಷ್ಯ ಆರೋಪದಲ್ಲಿ ಬೆಸ್ಕಾಂ ಅಧಿಕಾರಿಗಳ ವಿರುದ್ಧ ತಾವರೆಕೆರೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.


