ಬೆಂಗಳೂರು: ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕನಗರದಲ್ಲಿ ನಡೆದಿದೆ.
ಮೇಲ್ನೋಟಕ್ಕೆ ಹೊರ ರಾಜ್ಯದ ಸುಮಾರು 25 ರಿಂದ 26 ವಯಸ್ಸಿನ ಯುವತಿ ಎಂದು ಗುರುತಿಸಲಾಗಿದ್ದು. ಮಹಿಳೆಯನ್ನು ಕೊಂದು ನಂತರ ಆಕೆಯ ಮೃತದೇಹವನ್ನು ಪೀಸ್ ಪೀಸ್ ಆಗಿ ಕತ್ತರಿಸಿದ್ದು, ಬಳಿಕ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಹತ್ಯೆ ಬಳಿಕ ಮಾಂಸದ ಗುಡ್ಡೆ ಮಾಡಿ ಫ್ರಿಡ್ಜ್‌ನಲ್ಲಿ ಇಟ್ಟು ಮಗುವನ್ನು ಮನೆಯಲ್ಲೇ ಬಿಟ್ಟು ಆರೋಪಿ ಎಸ್ಕೇಪ್ ಆಗಿದ್ದಾನೆ. 15 ದಿನಗಳ ಹಿಂದೆ ಘಟನೆ ನಡೆದಿದೆ. ಕಳೆದ ಎರಡು ದಿನಗಳಿಂದ ವಾಸನೆ ಬರುತ್ತಿದ್ದು ಘಟನೆ ಬೆಳಕಿಗೆ ಬಂದಿದೆ.
2-3 ತಿಂಗಳಿನಿಂದ ಮನೆಯಲ್ಲಿ ಬಾಡಿಗೆಗಿದ್ದರು. ಇಂದು ಸಂಬಂಧಿಕರು ಬೀಗ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.