Tuesday, January 27, 2026
24.7 C
Bengaluru
Google search engine
LIVE
ಮನೆ#Exclusive Newsಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಶೀಘ್ರದಲ್ಲೇ ದರ ಏರಿಕೆ ಶಾಕ್!

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಶೀಘ್ರದಲ್ಲೇ ದರ ಏರಿಕೆ ಶಾಕ್!

ಬೆಂಗಳೂರು: ನಗರದ ನಮ್ಮ ಮೆಟ್ರೋ (Namma Metro) ರೈಲು ಇದೀಗ ದರ ಏರಿಕೆ ಬಗ್ಗೆ ಪ್ರಸ್ತಾಪ ಮಾಡಿದ್ದು, ಶೀಘ್ರದಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆಯಿದೆ.

ಇದಕ್ಕೂ ಮುಂಚೆ ಹಲವಾರು ಬಾರಿ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್‌ಸಿಎಲ್ (Bengaluru Metro Rail Corporation Limited) ಪ್ರಸ್ತಾಪಿಸಿತ್ತು. ಆದರೆ ಕಳೆದ ಹಲವು ವರ್ಷಗಳಿಂದ ದರ ಏರಿಕೆ ಮಾಡಿರಲಿಲ್ಲ. ಸದ್ಯ ಈ ಬಾರಿ ದರ ಏರಿಕೆ ಮಾಡಲು ಮುಂದಾಗಿದೆ.

ಟಿಕೆಟ್ ದರ ಏರಿಕೆಗೆ ಈಗಾಗಲೇ ಮೆಟ್ರೋ ದರ ನಿಗದಿ ಸಮಿತಿಯನ್ನು ರಚಿಸಿದ್ದು 15% ರಿಂದ 20% ರಷ್ಟು ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಈ ಕುರಿತು ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ್ ಚೌಹಾನ್ ಮಾತನಾಡಿ, ರಾಜ್ಯ ಹಾಗೂ ಕೇಂದ್ರದ ಹಿರಿಯ ಅಧಿಕಾರಿಗಳು, ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡು ದರ ಏರಿಕೆ ಬಗ್ಗೆ ಕಮಿಟಿ ಆಗಿದೆ. ಇದೊಂದು ಸ್ವತಂತ್ರ ಸಮಿತಿಯಾಗಿದ್ದು, ಒಂದು ಸಭೆ ಕೂಡಾ ಆಗಿದೆ. ಕಮಿಟಿ ಶೀಘ್ರದಲ್ಲೇ ವರದಿ ನೀಡಲಿದ್ದು, ವರದಿ ಆಧಾರದ ಮೇಲೆ ದರ ಏರಿಕೆ ಆಗಲಿದೆ. ಕಮಿಟಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಮಾಡಲಿದೆ. ನಮ್ಮ ಖರ್ಚು ವೆಚ್ಚ ನೋಡಿಕೊಂಡು ದರ ಏರಿಕೆ ಮಾಡಲಿದ್ದೇವೆ. ಇನ್ನೂ ಮೂರು ತಿಂಗಳ ಒಳಗಾಗಿ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ

ಅ.21 ರೊಳಗೆ ಪ್ರಯಾಣಿಕರು ಬಿಎಂಆರ್ಸಿಎಲ್‌ಗೆ ತಮ್ಮ ಅಭಿಪ್ರಾಯ ತಿಳಿಸಲು ಕಾಲಾವಕಾಶ ನೀಡಿದ್ದು, ಸಲಹೆಯನ್ನ ffc@bmrc.co.in ಇಮೇಲ್‌ಗೆ ಕಳಿಸುವಂತೆ ತಿಳಿಸಿದೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments