ಬೆಂಗಳೂರು : ಗೋಧ್ರಾ ಘಟನೆಯಾದ ಸಂದರ್ಭದಲ್ಲಿ ಪ್ರಕರಣ ದಾಖಲಾದಾಗ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಆಗಿದ್ದರು, ಆಗ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೆ ತಿರುಗೇಟು ನೀಡಿದ್ದಾರೆ.
ಮುಡಾ ಪ್ರಕರಣದ ಕುರಿತು ಹರಿಯಾಣ ಚುನಾವಣಾ ಪ್ರಚಾರದಲ್ಲಿ ಮೋದಿ ಅವರು ಉಲ್ಲೇಖಿಸಿದ್ರುದು, ಹಾಗೂ ಬಿಜೆಪಿಯ ನಾಯಕರು ಕೇಳಿರುವ ರಾಜೀನಾಮೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ, ರಾಜೀನಾಮೆ ಎಚ್.ಡಿ.ಕುಮಾರಸ್ವಾಮಿಯವರು ಪ್ರಕರಣವೊಂದರಲ್ಲಿ ಜಾಮೀನಿನ ಮೇಲೆ ಹೊರಗಡೆ ಸುತ್ತಾಡುತ್ತ ಇದ್ದಾರೆ. ಅವರು ರಾಜೀನಾಮೆ ನೀಡಿದ್ದಾರಾ? ಅವರು ರಾಜೀನಾಮೆ ನೀಡದೆ ಸರ್ಕಾರದಲ್ಲಿ ಮುಂದುವರೆದರೆ ಅವರ ಸರ್ಕಾರಕ್ಕೆ ಮುಜುಗರ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು. ಅಲ್ಲದೆ, ಪ್ರಕರಣವನ್ನು ನಾನು ಕಾನೂನಾತ್ಮಕವಾಗಿ ಎದುರಿಸುತ್ತೇನೆ ಎಂದರು. ಆದರೆ ನಾನು ರಾಜೀನಾಮೆ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಡಿ.ಕೆ.ಶಿವಕುಮಾರ್ ಸಹ ಪ್ರತಿಕ್ರಿಯೆ ನೀಡಿದು ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರದ ವೇಳೆ ಸಿಎಂ ಸಿದ್ದರಾಮಯ್ಯ ಅವರ ವಿಚಾರ ಪ್ರಸ್ತಾಪಿಸುವ ಮೂಲಕ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾಡಿದರು.


