Top Newsಸುದ್ದಿ

ರಾಜೀನಾಮೆಗೆ ಆಗ್ರಹಿಸಿ ದೋಸ್ತಿಗಳ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ದೋಸ್ತಿಗಳು ಮೈಸೂರು ಚಲೋ ಆರಂಭಿಸಿದ್ದಾರೆ.

ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಿದರು.

ಹೆಚ್‌ಡಿಕೆ ಮಾತನಾಡಿ, ಇದು ಜನವಿರೋಧಿ ಸರ್ಕಾರವಾಗಿದ್ದು ಮುಡಾ, ವಾಲ್ಮೀಕಿ ಪ್ರಕರಣ ಬಯಲಿಗೆ ಬಂದಿದೆ. ಜನರ ಆಸ್ತಿಗಳನ್ನು ನುಂಗಿದ ಸರ್ಕಾರದ ವಿರುದ್ಧ ನಾವು ಜನಾಂದೋಲನ ಮಾಡುತ್ತಿದ್ದೇವೆ ಎಂದು ತಿಳಿಸಿದರು. ದೇವೇಗೌಡರ ಕುಟುಂಬದಿಂದ ನೈಸ್ ಸುತ್ತಮುತ್ತ ಅಕ್ರಮ ಆಸ್ತಿ ಎಂಬ ಡಿಕೆ ಶಿವಕುಮಾರ್‌ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ಅವರ ಕೈಯಲ್ಲೇ ಇದೆ. ನಾವು ಅಕ್ರಮವಾಗಿ ಆಸ್ತಿ ಮಾಡಿದರೆ ಸರ್ಕಾರ ವಶಪಡಿಸಿಕೊಳ್ಳಲಿ. ಸರ್ಕಾರ ಅವರದ್ದೇ ಇದೆ, ಮುಟ್ಟುಗೋಲು ಹಾಕಿಕೊಳ್ಳಲಿ. ನಾವು ನ್ಯಾಯ ಬದ್ಧವಾಗಿ ಬದುಕಿದ್ದೇವೆ, ಇವರ ಥರ ಬದುಕಿಲ್ಲ. ಶಿವಕುಮಾರ್‌ ಬಿಡದಿಯಲ್ಲಿ ಆರೋಪ ಮಾಡಿದ್ದಾರೆ. ಅವರಿಗೆ ನಾನು ಬಿಡದಿಯಲ್ಲೇ ಉತ್ತರ ನೀಡುತ್ತೇನೆ ಎಂದು ತಿರುಗೇಟು ನೀಡಿದರು.

Comments (0)

Your email address will not be published. Required fields are marked *

Back to top button