Thursday, January 29, 2026
20.3 C
Bengaluru
Google search engine
LIVE
ಮನೆ#Exclusive NewsTop Newsಗಣರಾಜ್ಯೋತ್ಸ ಪ್ರಯುಕ್ತ ಬೆಳಿಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ

ಗಣರಾಜ್ಯೋತ್ಸ ಪ್ರಯುಕ್ತ ಬೆಳಿಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ 2025ರ ಅಂಗವಾಗಿ ಜ.26ರ ಭಾನುವಾರದಂದು ಮೆಟ್ರೋ ಸಂಚಾರವನ್ನು ಬೆಳಗ್ಗೆ 6 ಗಂಟೆಗೆ ಆರಂಭಿಸಲಾಗುತ್ತದೆ. ಜೊತೆಗೆ, ಗಣರಾಜ್ಯೋತ್ಸವ ಅಂಗವಾಗಿ ನಡೆಯುತ್ತಿರುವ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಹೋಗಲು ಅನುಕೂಲ ಆಗುವಂತೆ ಹೆಚ್ಚುವರಿ 20 ಟ್ರಿಪ್ ಮೆಟ್ರೋ ರೈಲು ಸಂಚಾರ ಮಾಡಲಿವೆ.

ಭಾನುವಾರ ನಮ್ಮ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆಯ ಬದಲಿಗೆ ಬೆಳಗ್ಗೆ 6 ಗಂಟೆಯಿಂದಲೇ ಕಾರ್ಯಾರಂಭ ಮಾಡಲಿವೆ. ನಾಲ್ಕೂ ಟರ್ಮಿನಲ್​ಗಳಿಂದ ಮತ್ತು ಮೆಜೆಸ್ಟಿಕ್​ನಿಂದ ಮೊದಲ ರೈಲು ಬೆಳಗ್ಗೆ 6 ಗಂಟೆಗೆ ಹೊರಡಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.

ಗಣರಾಜ್ಯೋತ್ಸವದ ಅಂಗವಾಗಿ ನಡೆಯುತ್ತಿರುವ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಹೋಗಲು ಅನುಕೂಲವಾಗುವಂತೆ ಹೆಚ್ಚುವರಿಯಾಗಿ 20 ರೈಲುಗಳು ಸಂಚಾರ ಮಾಡಲಿವೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

ಲಾಲ್​ಬಾಗ್​ ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಟೋಕನ್ ಬದಲಿಗೆ ಪೇಪರ್ ಟಿಕೆಟ್ ನೀಡಲಾಗುತ್ತದೆ. ಫ್ಲಾಟ್ 30 ರೂಪಾಯಿಯಂತೆ ಪೇಪರ್ ಟಿಕೆಟ್ ವಿತರಣೆ ಮಾಡಲಾಗುತ್ತದೆ. ಈ ಪೇಪರ್ ಟಿಕೆಟ್​ಗಳ ಮೂಲಕ ಲಾಲ್​ಬಾಗ್​ನಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಅವಕಾಶ ನೀಡಲಾಗುತ್ತದೆ ಎಂದು ಬಿಎಂಆರ್ ಸಿಎಲ್ ಹೇಳಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments