Wednesday, April 30, 2025
24 C
Bengaluru
LIVE
ಮನೆ#Exclusive NewsTop Newsರಾಜಕೀಯ ಕುತೂಹಲಕ್ಕೆ ಕಾರಣವಾದ: ಪರಮೇಶ್ವರ್, ಡಿಕೆ ಶಿವಕುಮಾರ್ ಭೇಟಿ

ರಾಜಕೀಯ ಕುತೂಹಲಕ್ಕೆ ಕಾರಣವಾದ: ಪರಮೇಶ್ವರ್, ಡಿಕೆ ಶಿವಕುಮಾರ್ ಭೇಟಿ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಡಾ ಹಗರಣದ ಸದ್ದು ಜೋರಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾದ ಸಂದರ್ಭ ಬಂದಲ್ಲಿ ಹೊಸ ಸಿಎಂ ಯಾರಾಗಲಿದ್ದಾರೆ ಎಂಬ ಚರ್ಚೆಯೂ ಜೋರಾಗಿದೆ. ಇಂಥ ಸಂದರ್ಭದಲ್ಲೇ ಎತ್ತಿನಹೊಳೆ ಯೋಜನೆ ನೆಪದಲ್ಲಿ ಸಿಎಂ ಹುದ್ದೆಯ ಆಕಾಂಕ್ಷಿಗಳಾದ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಜಿ ಪರಮೇಶ್ವರ್ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.

ಕೆಲವೇ ದಿನಗಳ ಹಿಂದಷ್ಟೇ, ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್​ನ ಅನೇಕ ನಾಯಕರು ಸಿಎಂ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿ ಹೇಳಿಕೆಗಳನ್ನು ನೀಡಿದ್ದಾರೆ. ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ರಾಜೀನಾಮೆ ನೀಡುವುದಿಲ್ಲ ಎನ್ನುತ್ತಲೇ ‘ಕೈ’ ನಾಯಕರು ತಾವೂ ಸಿಎಂ ಸ್ಥಾನದ ಆಕಾಂಕ್ಷಿ ಎನ್ನುತ್ತಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಸಚಿವ ಸತೀಶ್ ಜಾರಕಿಹೊಳಿ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಗಳು ಎನ್ನಲಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಡಿಕೆ ಶಿವಕುಮಾರ್ ಹಾಗೂ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದೀಗ ಗೃಹ ಸಚವರನ್ನು ಡಿಸಿಎಂ ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments