xr:d:DAFpKm--BSY:3,j:4171856268853883975,t:23072012

ಬೆಂಗಳೂರು: ಮುಂದಿನ ಮೂರು ಗಂಟೆಯಲ್ಲಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಿಂಚಿನ ಜೊತೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬೆಳಗ್ಗೆ 7 ಗಂಟೆಗೆ ಬಿಡುಗಡೆ ಮಾಡಿದ ಹವಾಮಾನ ವರದಿಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ,ರಾಮನಗರ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.

5 ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯೇ ಹಲವೆಡೆ ಮಳೆ ಸುರಿದಿದೆ.

ಮನೆಯೊಳಗೆ ಇರಿ, ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ. ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ. ಮರಗಳ ಕೆಳಗೆ, ಕಾಂಕ್ರೀಟ್ ಗೋಡೆಗಳಿಗೆ ಒರಗಬೇಡಿ. ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ಚಾಲನೆ ಮಾಡಿ ಎಂದು ಐಎಂಡಿ ಸೂಚಿಸಿದೆ.

By Veeresh

Leave a Reply

Your email address will not be published. Required fields are marked *

Verified by MonsterInsights