ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ. ಕೇಶವಮೂರ್ತಿಗೆ ಹೈಕೋರ್ಟ್ನಿಂದ ಕಾರ್ತಿಕ್, ನಿಖಿಲ್ ನಾಯಕ್ಗೆ 57ನೇ ಸಿಸಿಹೆಚ್ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ.
ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾಸ್ವಾಮಿ ಹತ್ಯೆ ನಡೆಯಿತು ಎಂಬ ಆರೋಪ ಇದೆ. ಘಟನೆ ನಡೆದ ಬಳಿಕ ಕೆಲವರು ಸೆರೆಂಡರ್ ಆಗಿದ್ದರು. ಆ ಪೈಕಿ ಕಾರ್ತಿಕ್, ನಿಖಿಲ್ ನಾಯಕ್ ಮತ್ತು ಕೇಶವಮೂರ್ತಿ ಪ್ರಮುಖರು. ಈ ಕೇಸ್ನಲ್ಲಿ ಕಾರ್ತಿಕ್ ಎ15, ಕೇಶವಮೂರ್ತಿ ಎ16 ಹಾಗೂ ನಿಖಿಲ್ ನಾಯಕ್ ಎ17 ಆಗಿದ್ದಾರೆ. ಈ ಮೂವರಿಗೂ ಜಾಮೀನು ನೀಡಲಾಗಿದ್ದು, ಸದ್ಯಕ್ಕೆ ರಿಲೀಫ್ ಸಿಕ್ಕಂತಾಗಿದೆ.
57ನೇ ಸಿಸಿಹೆಚ್ ಕೋರ್ಟ್ನಿಂದ ಎ15 ಕಾರ್ತಿಕ್ ಹಾಗೂ ಎ17 ನಿಖಿಲ್ ನಾಯಕ್ಗೆ ಜಾಮೀನು ಮಂಜೂರಾಗಿದೆ. ಎ16 ಆಗಿರುವ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ನೀಡಿದೆ. ಸಾಕ್ಷ್ಯ ನಾಶ ಮಾಡಿದ ಆರೋಪ ಆ ಮೂವರ ಮೇಲಿದೆ. ಪಟ್ಟಣಗೆರೆ ಶೆಡ್ನಲ್ಲಿ ಕಾರ್ತಿಕ್ ಕೆಲಸ ಮಾಡಿಕೊಂಡಿದ್ದ. ಶವ ಸಾಗಿಸಿದವರ ಗ್ಯಾಂಗ್ನಲ್ಲಿ ನಿಖಿಲ್, ಕಾರ್ತಿಕ್ ಇದ್ದರು. ಬಳಿಕ ಅವರ ಜೊತೆ ಕೇಶವಮೂರ್ತಿ ಕೂಡ ಶರಣಾಗಿದ್ದ.
ಎ1 ಆಗಿರುವ ಪವಿತ್ರಾ ಗೌಡ ಮತ್ತು ಎ2 ದರ್ಶನ್ ಕೂಡ ಜಾಮೀನಿಗಾಗಿ ಕಾಯುತ್ತಿದ್ದಾರೆ. ಅವರು ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇಂದು ಇಬ್ಬರ ಜಾಮೀನು ಅರ್ಜಿಯ ವಿಚಾರಣೆ ಕೂಡ ಮುಂದೂಡಿಕೆ ಆಗಿದೆ. ಸೆಪ್ಟೆಂಬರ್ 25ರಂದು ಪವಿತ್ರಾ ಗೌಡ ಜಾಮೀನು ಅರ್ಜಿ ಹಾಗೂ ಸೆಪ್ಟೆಂಬರ್ 27ಕ್ಕೆ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಸದ್ಯಕ್ಕೆ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಜಾರ್ಜ್ಶೀಟ್ ಸಲ್ಲಿಕೆ ಬಳಿಕ ಅವರು ಜಾಮೀನು ಪಡೆಯುವ ಬಗ್ಗೆ ಕುಟುಂಬದವರು ಹಾಗೂ ವಕೀಲರ ಜೊತೆ ಚರ್ಚೆ ಮಾಡುತ್ತಿದ್ದಾರೆ.




