Top Newsರಾಜ್ಯಸುದ್ದಿ

ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ: ಬೆಂಗಳೂರಿನಲ್ಲಿ ಪೊಲೀಸ್ ಬಿಗಿ ಭದ್ರತೆ – ಬಿ.ದಯಾನಂದ್

ಬೆಂಗಳೂರು: ಜನವರಿ 26 ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ​ ದಯಾನಂದ್ ಹೇಳಿದರು.

ಗಣರಾಜ್ಯೋತ್ಸವಕ್ಕೆ ಸಿದ್ದತೆ ಬಗ್ಗೆ ಮಾತನಾಡಿ ಮಾಹಿತಿ ನೀಡಿದ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್, ಗಣರಾಜ್ಯೋತ್ಸವದ ಅಂಗವಾಗಿ ಜನವರಿ 26ರಂದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಅಂದು ಬೆಳಿಗ್ಗೆ 9 ಗಂಟೆಗೆ  ಧ್ವಜಾರೋಹಣ ನೆರವೇರಿಸಲಿದ್ದಾರೆ. ಭದ್ರತೆಗಾಗಿ ಅಧಿಕಾರಿಗಳ ಜೊತೆಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಯಾವುದೇ ಸಮಸ್ಯೆಯಾಗದಂತೆ ರಾಜೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ, 114 ಮಂದಿ ಪಿಎಸ್​​ಐ, 58 ಮಂದಿ ಎಎಸ್ಐ, 80 ಮಂದಿ ಸಿಬ್ಬಂದಿ, 30 ಜನ ಕ್ಯಾಮೆರಾ ಸಿಬ್ಬಂದಿ ಸೇರಿದಂತೆ ಒಟ್ಟು 1051 ಜನ ಅಧಿಕಾರಿಗಳು ಭದ್ರತೆಗೆ ಇರುತ್ತಾರೆ. ಬಂದೋಬಸ್ತ್​​ಗೆ 10 ಕೆಎಸ್​ಆರ್​ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ ಇರುತ್ತದೆ. ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ.

ಕಲರ್ ಕೋಡ್​ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್ ನೀಡಲಾಗುತ್ತದೆ. ವಿಐಪಿ ಪಾಸ್ ಗೇಟ್-2ರ ಮೂಲಕ ಪ್ರವೇಶಿಸಬಹುದಾಗಿದೆ. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು. ಗೇಟ್-4ರಲ್ಲಿ ಬಿಳಿ ಪಾಸ್ ನೀಡಲಾಗುತ್ತದೆ, ಇಲ್ಲಿ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ಜ.26ರಂದು ಬೆಳಗ್ಗೆ 8.30 ರಿಂದ 10.30ರವರೆಗೆ ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್​ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರ ಸೂಚನೆ ನೀಡಿದ್ದಾರೆ.

ವಾಹನ ನಿಲುಗಡೆಗೆ ನಿಷೇಧ

ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಟಿಒ ವೃತ್ತದಿಂದ ಕೆ.ಆರ್.ರಸ್ತೆ, ಕಬ್ಬನ್ ಜಂಕ್ಷನ್​​ವರೆಗೆ, ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

Comments (0)

Your email address will not be published. Required fields are marked *

Back to top button