Thursday, November 20, 2025
19.9 C
Bengaluru
Google search engine
LIVE
ಮನೆ#Exclusive NewsTop Newsಬಡವರ ಮೇಲೆ ಬೆಸ್ಕಾಂ ಬ್ರಹ್ಮಾಸ್ತ್ರ-ಸೆ 1 ರಿಂದ ನಿಯಮಗಳು ಜಾರಿ

ಬಡವರ ಮೇಲೆ ಬೆಸ್ಕಾಂ ಬ್ರಹ್ಮಾಸ್ತ್ರ-ಸೆ 1 ರಿಂದ ನಿಯಮಗಳು ಜಾರಿ

ಬೆಂಗಳೂರು: ಗಡುವು ಮುಗಿದ್ರೂ ಬಿಲ್ ಪಾವತಿಸದ್ದರೆ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ ತಿಳಿಸಿದೆ. ಆ ಮೂಲಕ ಗ್ರಾಹಕರಿಗೆ ವಿದ್ಯುತ‌್ ಸಂಪರ್ಕ ಕಟ್​ ಬಿಸಿ ಮುಟ್ಟಿಸಲು ಬೆಸ್ಕಾಂ ಮುಂದಾಗಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸೆಪ್ಟೆಂಬರ್ 1ರಿಂದಲೇ ಕಟ್ಟುನಿಟ್ಟಾಗಿ ನಿಯಮ ಪಾಲನೆ ಜಾರಿಯಾಗಲಿದೆ ಎಂದು ತಿಳಿಸಿದೆ.

ಯಾವೆಲ್ಲಾ ನಿಯಮಗಳು ಜಾರಿ?

ದಿನ 90 ದಿನ ಬಾಕಿ ಬಿಲ್ ಕಟ್ಟೋದಕ್ಕೆ ಅವಕಾಶ ನೀಡುತ್ತಿದ್ದ ಬೆಸ್ಕಾಂ ಇದೀಗ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಬೆಸ್ಕಾಂ ಹೇಳಿದೆ. ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದಿದ್ದರೂ, ವಾಣಿಜ್ಯ ಬಳಕೆ, ಅಪಾರ್ಟ್ಮೆಂಟ್​ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರಿಗೂ ಇದು ಅನ್ವಯವಾಗಲಿದೆ. ಮೀಟರ್‌ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್‌ ಸಂಪರ್ಕ ಕಡಿತ ಮಾಡಲಾಗುತ್ತಿದ್ದು, ಹಾಗಾಗಿ ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಬೆಸ್ಕಾಂನಿಂದ ಮನವಿ ಮಾಡಲಾಗಿದೆ.

ವಿದ್ಯುತ‌ ಬಿಲ್‌ ಪಾವತಿಗೆ ಅಂತಿಮ ದಿನಾಂಕದವರೆಗೆ ಯಾವುದೇ ಬಡ್ಡಿಯಿಲ್ಲದೆ 15 ಕಾಲಾವಕಾಶ ನೀಡಲಾಗುತ್ತದೆ. ಅಂತಿಮ ದಿನಾಂಕದ ನಂತರವೂ ಬಡ್ಡಿಸಹಿತ ಪಾವತಿಗೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ.

ಆದಾಗ್ಯೂ ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ‌ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ. ಗಳಿಗಿಂತ ಅಧಿಕವಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಬೆಸ್ಕಾಂ ಕಡಿತಗೊಳಿಸಲಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments