ಬೆಳಗಾವಿ, ಸುವರ್ಣಸೌಧ : ಮಾಜಿ ಸಚಿವರೂ, ಶಿರಾ ಕ್ಷೇತ್ರದ ಹಾಲಿ ಶಾಸಕರೂ ಆದ ಟಿ.ಬಿ.ಜಯಚಂದ್ರ ಅವರಿಗೆ ಮಂಗಳವಾರ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸದನದ ಕಾರ್ಯ ಕಲಾಪಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಜತೆಗೆ ಉತ್ತಮ ಸಂಸದೀಯ ಪಟುವಾಗಿ ಚರ್ಚೆಯ ಗುಣ ಮಟ್ಟ ಹೆಚ್ಚಿಸಲು ನೀಡಿರುವ ಕೊಡುಗೆಯನ್ನು ಗುರುತಿಸಿ ಟಿ.ಬಿ. ಜಯಚಂದ್ರ ಅವರನ್ನು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ, ಸ್ಪೀಕರ್‌ಯು.ಟಿ.ಖಾದರ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಶಸ್ತಿ ಪ್ರದಾನ ಮಾಡಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಶಾಸಕ ಆರ್.ವಿ. ದೇಶಪಾಂಡೆಗೆ ಪ್ರಶಸ್ತಿ ನೀಡಲಾಗಿತ್ತು.