ಕನ್ನಡದ ಬಾದಶಾಹ್ ಕಿಚ್ಚ ಸುದೀಪ್ ಹಬ್ಬದ ದಿನವೇ ಬಿಗ್ ಬಾಸ್ ವೀಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಿಗ್ ಬಾಸ್ 12ರ ಹೊಸ ಪ್ರೋಮೋ ಸಹ ಬಿಡುಗಡೆಯಾಗಿದ್ದು, ಸುದೀಪ್ ಗೆಟಪ್ ಎಲ್ಲರ ಗಮನ ಸೆಳೆದಿದೆ.
ಬಿಗ್ ಬಾಸ್ ಕನ್ನಡ ಸೀಸನ್ 12 ಸೆಪ್ಟೆಂಬರ್ 28ರ ಭಾನುವಾರದಂದು ಗ್ರ್ಯಾಂಡ್ ಓಪನಿಂಗ್ ಆಗಲಿದೆ.
ಕಿರುತೆರೆ ಪ್ರೇಕ್ಷಕರಿಗೆ ಬಿಗ್ ಬಾಸ್ ರಿಯಾಲಿಟಿ ಶೋ ಎಂದರೆ ಸಖತ್ ಇಷ್ಟ.ಈಗಾಗಲೇ ಕನ್ನಡದಲ್ಲಿ 11 ಸೀಸನ್ ಗಳು ಯಶಸ್ವಿಯಾಗಿ ಮುಗಿದಿದ್ದು, ಸದ್ಯದಲ್ಲೇ 12ನೇ ಸೀಸನ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಕಿಚ್ಚ ಸುದೀಪ್ ನಿರೂಪಣೆ ಮಾಡಲು ಸಜ್ಜಾಗಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಬಿಗ್ ಬಾಸ್ ಪ್ರಸಾರ ಆಗಲಿದ್ದು,ಈಗ ಪ್ರೋಮೋ ಬಿಡುಗಡೆ ಮಾಡಲಾಗಿದೆ.
ಕಿಚ್ಚ ಸುದೀಪ್ ಅವರು ಮಾರ್ಕ್ ಸಿನಿಮಾಗಾಗಿ ಉದ್ದ ಕೂದಲು ಬಿಟ್ಟಿದ್ದಾರೆ.ಅವರ ಈ ಹೇರ್ ಸ್ಟೈಲ್ ಎಲ್ಲರಿಗೂ ಇಷ್ಟ ಆಗಿದೆ. ಅದೇ ಗೆಟಪ್ ನಲ್ಲಿ ಅವರು ಬಿಗ್ ಬಾಸ್ ಪ್ರೋಮೋದಲ್ಲಿ ಕಾಣಿಸಿಕೊಂಡಿದ್ದಾರೆ. ‘ರಿಯಾಲಿಟಿ ಶೋಗಳ ಬಾಸ್, ರಿಯಲ್ ಎಂಟರ್‌ಟೈನ್‌ಮೆಂಟ್‌ಗೆ ಒಂದೇ ಅಡ್ರೆಸ್. ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಓಪನಿಂಗ್ ಸೆಪ್ಟೆಂಬರ್ 28ಕ್ಕೆ’ ಎಂದು ಸೋಶಿಯಲ್ ಮೀಡಿಯಾದಲ್ಲಿ ಪ್ರೋಮೋ ಹಂಚಿಕೊಳ್ಳಲಾಗಿದೆ.
ಸೆಪ್ಟೆಂಬರ್ 28ರ ಭಾನುವಾರದಂದು ಬಿಗ್ ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋ ಗ್ರ್ಯಾಂಡ್ ಓಪನಿಂಗ್ ಆಗಲಿದೆ. ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಬರಬಹುದು ಎಂಬುದರ ಲೆಕ್ಕಾಚಾರ ಈಗಲೇ ಶುರುವಾಗಿದೆ. ಸುದೀಪ್ ಅವರು ಮಾರ್ಕ್ ಮತ್ತು ಬಿಲ್ಲ ರಂಗ ಭಾಷಾ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆಯೇ ಅವರು ಬಿಗ್ ಬಾಸ್ ಶೋ ನಡೆಸಿಕೊಡಲು ಸಜ್ಜಾಗಿದ್ದಾರೆ.