ಮಂಡ್ಯ : ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಪರಶುರಾಮ್ ಸತ್ತೀಗೇರಿ ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ್ ಸತ್ತೀಗೇರಿ ಅವರು ಆದೇಶ ಹೊರಡಿಸಿದ್ದಾರೆ.
ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಇಂದು ಶ್ರೀರಂಗಪಟ್ಟಣದಲ್ಲಿ ಯಾವುದೇ ಮೆರವಣಿಗೆ ಮಾಡುವಂತಿಲ್ಲ, ಗುಂಪೂಗೂಡುವಂತಿಲ್ಲ. ಪಟಾಕಿ ಸಿಡಿಸಿ ಸಂಭ್ರಮಾಚರಣೆ, ಮಾರಾಕಾಸ್ತ್ರಗಳನ್ನು ಒಯ್ಯುವಂತಿಲ್ಲ ಎಂದು ತಿಳಿಸಲಾಗಿದೆ.
ಟಿಪ್ಪು ವಕ್ಫ್ ಎಸ್ಟೇಟ್, ಟಿಪ್ಪು ಜಯಂತಿ ಆಚರಿಸಲು ಮುಂದಾಗಿದ್ದು, ಮೈಸೂರು ಸೇರಿದಂತೆ ಹಲವೆಡೆಯಿಂದ ಜನ ಆಗಮಿಸುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಗ್ಗೆ 6 ರಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ರಾತ್ರಿ 11 ಗಂಟೆವರೆಗೆ ಇರಲಿದೆ. ಯಾವುದೇ ಮೆರವಣಿಗೆ, ಪ್ರತಿಭಟನೆ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ, ಯಾವುದೇ ಘೋಷಣೆ ಕೂಗದಂತೆ ಆದೇಶ ಹೊರಡಿಸಿತ್ತು. ಇನ್ನು ಟಿಪ್ಪು ಮಡಿದ ಸ್ಥಳ ,ಗುಂಬಸ್ ,ಜಾಮೀಯಾ ಮಸೀದಿ ಸೇರಿ ಪಟ್ಟಣದ ಪ್ರಮುಖ ವೃತ್ತದಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಇನ್ನು ಸರಳವಾಗಿ ಟಿಪ್ಪು ಜಯಂತಿ ಆಚರಣೆ ಮಾಡುವಂತೆ ಮುಸ್ಲಿಂ ಮುಖಂಡರಿಗೆ ತಿಳಿಸಿದ್ದು, ಶಾಸಕ ತನ್ವೀರ್ ಸೇಠ್ ನೇತೃತ್ವದಲ್ಲಿ ಗುಂಬಸ್ ನಲ್ಲಿರುವ ಟಿಪ್ಪು ಸಮಾಧಿಗೆ ಪುಷ್ಟ ನಮನ ಸಲ್ಲಿಸಲಿದ್ದಾರೆ.