ಹುಬ್ಬಳ್ಳಿ: ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಇಡಿ ಸಮನ್ಸ್ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇಬ್ಬರಿಗೂ ಬಿಗ್ ರಿಲೀಫ್ ನೀಡಿದೆ.
ವಾದ ಪ್ರತಿವಾದ ಆಲಿಸಿದ ಹೈಕೋರ್ಟ್‌ನ ಎಂ ನಾಗಪ್ರಸನ್ನ ಪೀಠ, ಭೈರತಿ ಸುರೇಶ್ ಹಾಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರಿಗೆ ಇಡಿ ನೀಡಿದ್ದ ಸಮನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯನವರು ಇ.ಡಿ ತನಿಖೆಯಿಂದ ಪಾರಾಗಿದ್ದಾರೆ.


