ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಸೆಷನ್ಸ್ ಕೋರ್ಟ್ ಆದೇಶವನ್ನು ಅಮಾನತು ಮಾಡಿರುವ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಪೀಠ, ಸತೀಶ್ ಸೈಲ್ ಸೇರಿದಂತೆ ಪ್ರಕರಣದ ಸೇರಿದಂತೆ ಎಲ್ಲಾ ಅಪರಾಧಿಗಳಿಗೂ ಜಾಮೀನು ನೀಡಿದೆ.
ಪ್ರಕರಣದ ಅಪರಾಧಿಗಳಿಗೆ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್ ಪೀಠ, ದಂಡದ ಮೊತ್ತ 44 ಕೋಟಿಯಲ್ಲಿ ಶೇಕಡಾ 25ರಷ್ಟು ಮೊತ್ತವನ್ನು ಠೇವಣಿ ಇಡುವಂತೆ ಷರತ್ತು ವಿಧಿಸಿದೆ. 6 ವಾರಗಳಲ್ಲಿ ದಂಡದ ಮೊತ್ತ 44 ಕೋಟಿಯಲ್ಲಿ 11 ಕೋಟಿ ಠೇವಣಿ ಇಡುವಂತೆ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಪೀಠ ಸೂಚನೆ ನೀಡಿದೆ. ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದ ಆರೋಪಿಗಳು ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.