ಸಿನಿಮಾ

ನಟ ಶ್ರೀಮುರಳಿ ಅಭಿಮಾನಿಗಳಿಗೆ ಬಿಗ್ ಶಾಕ್..!

ಬೆಂಗಳೂರು:  ನಟ ಶ್ರೀಮುರಳಿ ಬಘೀರ ಚಿತ್ರದ ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ. ಬಘೀರ ಆ್ಯಕ್ಷನ್ ಚಿತ್ರವಾಗಿದ್ದು ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ದೃಶ್ಯಗಳಿವೆ. ಫೈಟ್ ದೃಶ್ಯಗಳನ್ನು ಚಿತ್ರೀಕರಿಸುವ ವೇಳೆ ಶ್ರೀಮುರಳಿ ಕಾಲಿಗೆ ಗಾಯವಾಗಿದೆ.

ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶ್ರೀಮುರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ವೀಲ್ ಚೇರ್ ಸಹಾಯದ ಮೂಲಕ ನಟ ಓಡಾಡುತ್ತಿದ್ದಾರೆ. ಎರಡು ದಿನಗಳ ನಂತರ ಶ್ರೀಮುರಳಿ ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀಮುರಳಿಗೆ ಕೆಲವು ತಿಂಗಳುಗಳ ಹಿಂದೆ ಬಘೀರ ಚಿತ್ರದ ಶೂಟಿಂಗ್ ಸೆಟ್‌ನಲ್ಲಿಯೇ ಕಾಲಿಗೆ ಗಾಯವಾಗಿತ್ತು. ಇದೀಗ ಎರಡನೇ ಬಾರಿ ಕೂಡ ಕಾಲಿಗೆ ಗಾಯವಾಗಿದೆ. ಹೊಂಬಾಳೆ ಫಿಲ್ಮ್ಸ್ ಬಘೀರ ಚಿತ್ರವನ್ನು ನಿರ್ಮಿಸುತ್ತಿದ್ದು ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಕಥೆ ಬರೆದಿದ್ದಾರೆ. ಲಕ್ಕಿ ಸಿನಿಮಾ ಖ್ಯಾತಿಯ ಡಾ. ಸೂರಿ ಬಘೀರ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

Comments (0)

Your email address will not be published. Required fields are marked *

Back to top button