ಹನಿಟ್ರ್ಯಾಪ್ ಕೇಸ್ಗೆ ಬಿಗ್ ಟ್ವಿಸ್ಟ್; ಸುಪ್ರೀಂಗೆ PIL ಸಲ್ಲಿಕೆ

ಬೆಂಗಳೂರು: ಇತ್ತಿಚಿಗೆ ವಿಧಾನಸಭೆ ಅಧಿವೇಶನದಲ್ಲಿ ಸಚಿವ ಕೆ.ಎನ್.ರಾಜಣ್ಣ ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದರು. ಸಚಿವರ ಹೇಳಿಕೆ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿ ಆಗಿತ್ತು.
ಇದೀಗ ಹನಿಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವೀಸ್ಟ್ ಸಿಕ್ಕಿದೆ. ಹನಿಟ್ರ್ಯಾಪ್ ಪ್ರಕರಣದ ವಿಚಾರಣೆ ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ಗೆ ಪಿಐಎಲ್ (PIL) ಸಲ್ಲಿಕೆಯಾಗಿದೆ.
ಇದು ಕೇವಲ ರಾಜಕಾರಣಕ್ಕೆ ಮಾತ್ರ ಸೀಮಿತವಾಗಿಲ್ಲ. ಅನೇಕ ಕ್ಷೇತ್ರಗಳಲ್ಲಿರುವ ವ್ಯಕ್ತಿಗಳು ಸೇರಿ ಒಟ್ಟು 48 ಗಣ್ಯರು ಹನಿಟ್ರ್ಯಾಪ್ಗೆ ಒಳಗಾಗಿದ್ದಾರೆ ಎಂಬ ಆರೋಪ ಇದೆ. ಹೀಗಾಗಿ ನಾವು ಸಲ್ಲಿಸುತ್ತಿರುವ ಸಾರ್ವಜನಿಕ ಹಿತಾಸಕ್ತಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪಿಐಎಲ್ ಸಲ್ಲಿಸಿದ ವ್ಯಕ್ತಿ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿಕೊಂಡಿದ್ದಾರೆ.
ಗಂಭೀರವಾಗಿ ಪರಿಗಣಿಸಿರುವ ನ್ಯಾಯಮೂರ್ತಿ ಖನ್ನಾ ನೇತೃತ್ವದ ಪೀಠ, ವಿಚಾರಣೆ ನಡೆಸಲು ಒಪ್ಪಿಕೊಂಡಿದೆ. ಇಂದು ಮಧ್ಯಾಹ್ನ 2.30ರ ನಂತರ ಅರ್ಜಿ ವಿಚಾರಣೆ ಸಾಧ್ಯತೆ ಇದೆ. ಒಂದು ವೇಳೆ ಇಂದು ವಿಚಾರಣೆ ನಡೆಯದಿದ್ದರೆ ನಾಳೆ, ಸುಪ್ರೀಂ ಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.




