ಬೆಳ್ತಂಗಡಿ: ಬಸ್ ಮತ್ತು ಬೈಕ್ ನಡುವೆ ಸಂಭವಿಸಿ ಬೈಕ್ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ
ಪಾರ್ಪಿಕಲ್ ಸೇತುವೆ ಬಳಿ ನಡೆದಿದೆ..
ಕೋಲಾರ ಜಿಲ್ಲೆಯ ಮುಳಬಾಗಿಲು ನಿವಾಸಿ ದೀಪಕ್ (24) ಮೃತ ಯುವಕ. ಧರ್ಮಸ್ಥಳ ಕಡೆಗೆ ಬರುತ್ತಿದ್ದ ಸರಕಾರಿ ಬಸ್ ಮತ್ತು ಧರ್ಮಸ್ಥಳ ಕಡೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಬೈಕ್ ಮಧ್ಯೆ ಈ ಅಪಘಾತ ಸಂಭವಿಸಿದೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.


