ರಾಜಕೀಯರಾಜ್ಯಸುದ್ದಿ

ಬಿಕ್ಲು ಶಿವ ಕೊಲೆ ಕೇಸ್; ಶಾಸಕ ಬೈರತಿ ಬಸವರಾಜ್‌ಗೆ ಜೈಲೇ ಗತಿ!

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ್ ಅವರಿಗೆ ಸಂಕಷ್ಟ ಎದುರಾಗಿದ್ದು, ನ್ಯಾಯಾಲಯವು ಫೆಬ್ರವರಿ 26ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸಿಐಡಿ ಪೊಲೀಸರ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ವಿಚಾರಣೆಯ ಸಂದರ್ಭದಲ್ಲಿ ಬೈರತಿ ಬಸವರಾಜ್ ಪರ ವಕೀಲರು, ಶಾಸಕರಿಗೆ ಹೃದಯ ಸಂಬಂಧಿ ಕಾಯಿಲೆ ಇರುವುದರಿಂದ ಅವರಿಗೆ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಮತ್ತು ಅಲ್ಲಿಯವರೆಗೆ ಜಾಮೀನು ಅರ್ಜಿ ವಿಚಾರಣೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಆದರೆ ಇದಕ್ಕೆ ಸಿಐಡಿ ಪರ ವಕೀಲರು ತೀವ್ರಕ್ಷೇಪ ವ್ಯಕ್ತಪಡಿಸಿ, ವೈದ್ಯಕೀಯ ವರದಿಯಲ್ಲಿ ಅಂತಹ ಗಂಭೀರ ಸಮಸ್ಯೆಗಳಿಲ್ಲ ಎಂದು ವಾದಿಸಿದರು. ಉಭಯ ಪಕ್ಷಗಳ ವಾದ ಆಲಿಸಿದ ನ್ಯಾಯಾಲಯವು ಬೈರತಿ ಬಸವರಾಜ್ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲು ಆದೇಶಿಸಿದೆ.

ಶಾಸಕರ ಆರೋಗ್ಯದ ದೃಷ್ಟಿಯಿಂದ ಜಯದೇವ ಆಸ್ಪತ್ರೆಯ ವೈದ್ಯರು ಸೂಚಿಸಿರುವ ವಿಶೇಷ ಆಹಾರ ಕ್ರಮವನ್ನು ಜೈಲಿನಲ್ಲಿಯೂ ಮುಂದುವರಿಸಲು ನ್ಯಾಯಾಲಯವು ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಫೆಬ್ರವರಿ 26ರವರೆಗೆ ಅವರು ನ್ಯಾಯಾಂಗ ಬಂಧನದಲ್ಲಿ ಇರಲಿದ್ದು, ಅಲ್ಲಿಯವರೆಗೆ ಅವರಿಗೆ ಜಾಮೀನು ಸಿಗುತ್ತದೆಯೇ ಅಥವಾ ಇಲ್ಲವೇ ಎಂಬುದು ಕುತೂಹಲ ಮೂಡಿಸಿದೆ.

Comments (0)

Your email address will not be published. Required fields are marked *

Back to top button