Tuesday, January 27, 2026
24.7 C
Bengaluru
Google search engine
LIVE
ಮನೆರಾಜ್ಯಡ್ಯಾಗರ್​ ನಿಂದ ಬರ್ತ್ ಡೇ ಕೇಕ್ ಕಟ್: ಪೊಲೀಸರಿಂದ ಯುವಕರಿಗಾಗಿ ಶೋಧ

ಡ್ಯಾಗರ್​ ನಿಂದ ಬರ್ತ್ ಡೇ ಕೇಕ್ ಕಟ್: ಪೊಲೀಸರಿಂದ ಯುವಕರಿಗಾಗಿ ಶೋಧ

ನೆಲಮಂಗಲ: ಕಾನೂನು ಬಾಹಿರವಾಗಿ ಮಾರಕಾಯುಧಗಳನ್ನು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ದಾಬಸ್‌ಪೇಟೆಯಲ್ಲಿ ಯುವಕರ ಗುಂಪೊಂದು ತಲ್ವಾರ್ (ಡ್ರ್ಯಾಗನ್) ಮೂಲಕ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ.

ದಾಬಸ್‌ಪೇಟೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಐವರು ಯುವಕರ ಗುಂಪು ಸೇರಿಕೊಂಡು ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದಾರೆ. ಸಾರ್ವಜನಿಕ ಪ್ರದೇಶದಲ್ಲಿ ಮಾರಕಾಯುಧ ಹಿಡಿದು ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸಾರ್ವಜನಿಕವಾಗಿ ಮಾರಕಾಯುಧಗಳನ್ನು ಪ್ರದರ್ಶಿಸುವುದು ಕಾನೂನುಬದ್ಧವಾಗಿ ಅಪರಾಧವಾಗಿದ್ದು, ಈ ಹಿನ್ನೆಲೆಯಲ್ಲಿ ತುಮಕೂರು ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ವಿಡಿಯೋದಲ್ಲಿರುವ ಯುವಕರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಗಡಿಭಾಗದ ದಾಬಸ್‌ಪೇಟೆಯಲ್ಲಿ ನಡೆದಿರುವ ಈ ದುಸ್ಸಾಹಸದ ಬಗ್ಗೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವ ಸಾಧ್ಯತೆಯಿದೆ. “ಹುಟ್ಟುಹಬ್ಬದ ಹೆಸರಿನಲ್ಲಿ ಸಾರ್ವಜನಿಕ ಶಾಂತಿ ಕದಡುವ ಇಂತಹ ಪುಂಡಾಟಿಕೆಗಳನ್ನು ಸಹಿಸುವುದಿಲ್ಲ” ಎಂದು ಪೊಲೀಸ್ ಮೂಲಗಳು ಎಚ್ಚರಿಕೆ ನೀಡಿವೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments