ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಹಾಗೂ ಬಿಸಿಯೂಟ ನೌಕರರು ಇಂದು ಬೃಹತ್ ಪ್ರತಿಭನಾ ಮೆರವಣಿಗೆ ಮೂಲಕ ಸಂಸದರ ಕಚೇರಿ ಚಲೋ ನಡೆಸಿದರು.
ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಹೊರಟ ಎರಡು ಸಾವಿರಕ್ಕೂ ಹೆಚ್ಚು ಪ್ರತಿಭಟನಾ ನಿರತ ಮಹಿಳೆಯರು ಸಿಐಟಿಯು ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೆರಿ ಬಳಿ ಇರುವ ಸಂಸದರ ಕಚೇರೆವರೆಗೆ ಕಾಲ್ನಡಿಗೆಯಲ್ಲಿ ತೆರಳಿ ಮುಷ್ಕರ ನಡೆಸಿದರು.
ಸೇವಾ ಭದ್ರತೆ, ವೇತನ ಹೆಚ್ಚಳ, ಕೆಲಸ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ಪ್ರತಿಭಟನಾಕಾರರು, ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.