Freedom TV
ಅಸೆಂಬ್ಲಿ ಚುನಾವಣಾ ಅಖಾಡಕ್ಕೆ ಬಿಜೆಪಿ ಸಜ್ಜು – ಸೆ.29ರಂದು ಎಲ್ಲಾ ರಾಜ್ಯ ಉಸ್ತುವಾರಿಗಳ ಸಭೆ!
BJP gears up for the Assembly election arena – Meeting of all state in-charges on September 29!

ನವದೆಹಲಿ: ಪಂಚ ರಾಜ್ಯಗಳ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದಂತೆ ಬಿಜೆಪಿ ಈಗಲೇ ರಣತಂತ್ರ ರೂಪಿಸಲು ಮುಂದಾಗಿದೆ. ಇದರ ಮೊದಲ ಹೆಜ್ಜೆಯಾಗಿ ಸೆಪ್ಟೆಂಬರ್ 29ರಂದು ನವದೆಹಲಿಯ ಕೇಂದ್ರ ಕಚೇರಿಯಲ್ಲಿ ಎಲ್ಲಾ ರಾಜ್ಯಗಳ ಉಸ್ತುವಾರಿಗಳ ಮಹತ್ವದ ಸಭೆಯನ್ನು ಕರೆಯಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ, ಮುಂಬರುವ ಪಂಚ ರಾಜ್ಯಗಳ ಚುನಾವಣೆಗೆ ಕೇಸರಿ ಪಡೆ ಭರ್ಜರಿ ಕಾರ್ಯತಂತ್ರ ರೂಪಿಸಲಿದೆ.
ಮುಂದಿನ ವರ್ಷ ವಿಧಾನಸಭಾ ಚುನಾವಣೆ ಎದುರಿಸಲಿರುವ ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಪಂಜಾಬ್, ಗೋವಾ ಮತ್ತು ಉತ್ತರಾಖಂಡ ರಾಜ್ಯಗಳ ರಾಜಕೀಯ ಪರಿಸ್ಥಿತಿ ಹಾಗೂ ಚುನಾವಣಾ ಸಿದ್ಧತೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ಬಗ್ಗೆಯೂ ಚರ್ಚೆ ನಡೆಯಲಿದ್ದು, ವಿರೋಧ ಪಕ್ಷಗಳನ್ನು ಎದುರಿಸಲು ಹೊಸ ರಾಜಕೀಯ ವ್ಯೂಹಗಳನ್ನು ಹೆಣೆಯಲು ಬಿಜೆಪಿ ಹೈಕಮಾಂಡ್ ಸಜ್ಜಾಗಿದೆ.




