ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಸಾವಿರಾರು ಮೃತದೇಹಗಳನ್ನು ಹೂಳಲಾಗಿದೆ ಎಂದು ಆರೋಪಿಸಿ ಅಪಪ್ರಚಾರ ಮಾಡಲಾಗುತ್ತಿದೆ. ಇದು ವ್ಯವಸ್ಥಿತವಾಗಿ ಕ್ಷೇತ್ರದ ಮೇಲೆ ಮಸಿ ಬಳಿಯುವ ಕೆಲಸ ಎಂದು ಬಿಜೆಪಿ ನಾಯಕರು, ಕಾರ್ಯಕರ್ತರು ಸೇರಿ ಧರ್ಮಸ್ಥಳ ಚಲೋ ಆರಂಭಿಸಿದ್ದಾರೆ.
ಇಂದು ಬಿಜೆಪಿ ವತಿಯಿಂದ ಧರ್ಮಸ್ಥಳ ಚಲೋ ಸಮಾವೇಶ ನಡೆಸಿದ್ದಾರೆ. ಈ ಸಭೆ ಮುಗಿಯುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಜೊತೆ ಅವರು ಮಾತುಕತೆ ನಡೆಸಿದ್ದಾರೆ. ಸೌಜನ್ಯ ಹೋರಾಟದಲ್ಲಿ ಜೊತೆಗಿರುವುದಾಗಿ ಭರವಸೆ ನೀಡಿದ್ದಾರೆ. ವಿಜಯೇಂದ್ರಗೆ ಸಂಸದ ಕ್ಯಾ. ಬ್ರಿಜೇಶ್ ಚೌಟಾ, MLC ಡಾ. ಧನಂಜಯ್ ಸರ್ಜಿ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಾಥ್ ನೀಡಿದ್ದಾರೆ..