Top Newsರಾಜಕೀಯ

ಎಸ್​ ಟಿ ಸೋಮಶೇಖರ್​, ಶಿವರಾಮ್ ಹೆಬ್ಬಾರ್ ಉಚ್ಛಾಟನೆ – ವಿಜಯೇಂದ್ರ ಮೇಲುಗೈ

ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಭಾರತೀಯ ಜನತಾ ಪಕ್ಷದಿಂದ ಆರು ವರ್ಷ ಉಚ್ಛಾಟಿಸಿ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ.

ಕಳೆದ ತಿಂಗಳಷ್ಟೇ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಈ ಬೆನ್ನಲ್ಲೇ ಯಶವಂತಪುರ ಶಾಸಕ ಎಸ್‌ಟಿ ಸೋಮಶೇಖರ್‌ ಹಾಗೂ ಯಲ್ಲಾಪುರ ಶಾಸಕ ಶಿರಾಮ್ ಹೆಬ್ಬಾರ್‌ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಇದರೊಂದಿಗೆ ವಿಧಾನಸಭೆಯಲ್ಲಿ ಬಿಜೆಪಿ ಬಲ 62ಕ್ಕೆ ಕುಸಿದಿದೆ.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 66 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಬಸವರಾಜ ಬೊಮ್ಮಾಯಿ ರಾಜೀನಾಮೆ ಕಾರಣ ನಡೆದ ಶಿಗ್ಗಾಂವಿ ಉಪಚುನಾವಣೆಯಲ್ಲಿ ಭರತ್ ಬೊಮ್ಮಾಯಿ ಸೋಲು ಅನುಭವಿಸಿದ್ದರು. ಇದೀಗ ಯತ್ನಾಳ್​, ಎಸ್​ಟಿಎಸ್​ ಮತ್ತು ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಹೀಗಾಗಿ ವಿಧಾನಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ಕುಸಿದಿದೆ.

ವಿಧಾನಸಭಾ ಚುನಾವಣೆಯ ನಂತರ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ವಿರುದ್ಧ ಶಿಸ್ತು ಕ್ರಮಕ್ಕೆ ಸೂಚಿಸಲಾಗಿದೆ ಎಂದು ಇತ್ತೀಚಿಗೆ ಪಕ್ಷದ ಅಧ್ಯಕ್ಷ ವಿಜಯೇಂದ್ರ ಹೇಳಿದ್ದರು

Comments (0)

Your email address will not be published. Required fields are marked *

Back to top button