ಕೊಪ್ಪಳ: ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಿದ ಬಳಿಕ ರಾಜ್ಯ ರಾಜಕಾರಣದಲ್ಲಿ ಹಲವು ವಿಷಯಗಳು ಚರ್ಚೆಗೆ ಗ್ರಾಸವಾಗಿದೆ.
ಸರ್ಕಾರಿ ಕಾಮಗಾರಿಯಲ್ಲಿ ಮುಸ್ಲಿಂರಿಗೆ ವಿಶೇಷ ಮೀಸಲಾತಿ ನೀಡಿರುವುದನ್ನು ಖಂಡಿಸಿ ಬಿಜೆಪಿ ಏಪ್ರಿಲ್ನಿಂದ ಬೃಹತ್ ಹೋರಾಟಕ್ಕೆ ಸಜ್ಜಾಗಿದೆ.
ಈ ಬಗ್ಗೆ ಕೊಪ್ಪಳದಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ರವಿಕುಮಾರ್, ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಿರುವುದನ್ನು ಖಂಡಿಸಿ ಏಪ್ರಿಲ್ 1, 2, 3ರಿಂದ ಹುಬ್ಬಳ್ಳಿ, ಕೊಪ್ಪಳ, ಮೈಸೂರು, ತುಮಕೂರಿನಲ್ಲಿ ಹೋರಾಟ ಮಾಡಲಾಗುವುದು, ನಾಲ್ಕು ದಿನಗಳು ಅಹೋರಾತ್ರಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ರಾಜ್ಯ ನಾಯಕರು ಈ ನಾಲ್ಕು ಕಡೆ ಹೋರಾಟದಲ್ಲಿ ಭಾಗಿಯಾಗುತ್ತಾರೆ. ಮೀಸಲಾತಿಯನ್ನು ಹಿಂಪಡೆಯೋವರೆಗೆ ಈ ಹೋರಾಟ ಕೈಬಿಡೋದಿಲ್ಲ ಎಂದರು. ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಂವಿಧಾನ ಬದಲಾವಣೆ ಹೇಳಿಕೆಯನ್ನು ಖಂಡಿಸಿದರು.


