ನವದೆಹಲಿ : ಸಮಾಜವಾದಿ ಪಕ್ಷದ ಸದರ್ ಶಾಸಕ ಸುರೇಶ್ ಯಾದವ್ ಬಾರಾಬಂಕಿ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರವನ್ನು “ಹಿಂದೂ ಭಯೋತ್ಪಾದಕ ಸಂಘಟನೆ” ಎಂದು ಹೇಳುವ ಮಾಡುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.
ಇದಕ್ಕೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಪಕ್ಷದ ನಾಯಕರು ಯಾದವ್ ಅವರ ಹೇಳಿಕೆಯನ್ನು ಬೇಜವಾಬ್ದಾರಿ ಎಂದು ಖಂಡಿಸಿದ್ದಾರೆ. ಇದು ಸಮಾಜವಾದಿ ಪಕ್ಷದ ಹತಾಶೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ. ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲ ಸಮಾಜವಾದಿ ಪಕ್ಷದ ಜನಪ್ರತಿನಿಧಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ ಬಗ್ಗೆ ನೀಡಿರುವ ಹೇಳಿಕೆಗೆ ಸಮಾಜವಾದಿ ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಪ್ರತಿಯಾಗಿ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಶನಿವಾರ ಎಸ್ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.