ರಾಜಕೀಯ

ಬಿಜೆಪಿ-ಜೆಡಿಎಸ್​ ಮೈತ್ರಿ ಮುಂದುವರೆಯುತ್ತದೆ – ಬಿ.ವೈ.ವಿಜಯೇಂದ್ರ

ಹೈಕಮಾಂಡ್​ ಆದೇಶದಂತೆ ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿ ಮುಂದುವರೆಯತ್ತದೆ ಎಂದು ಮಂಡ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.ರಾಷ್ಟ್ರೀಯ ನಾಯಕರು ಹಾಗೂ ಅಧ್ಯಕ್ಷರ ತೀರ್ಮಾನದಂತೆ ಮನ್ನಡೆಯುತ್ತೇವೆ.

ಮುಂಬರುವ ಸ್ಥಳೀಯ ಚುನಾವಣೆ ಹಿನ್ನೆಲೆ ರಾಜ್ಯ ಪ್ರವಾಸ ಕೈಗೋಳ್ಳಲು ತೀರ್ಮಾನಿಸಿದ್ದೇವೆ.ಬಿಜೆಪಿ ಪಕ್ಷದ ಹಿರಿಯ ಮುಖಂಡರ ನೇತೃತ್ವದಲ್ಲಿ ಪಕ್ಷ ಬಲವರ್ಧನೆಗೆ ರಾಜ್ಯದ 10 ಭಾಗಗಳಲ್ಲಿ ಕೋರ್​ ಕಮಿಟಿ ರಚಿಸಿದ್ದೇವೆ. 3 ರಿಂದ 4 ಜಿಲ್ಲೆಯನ್ನೊಳಗೊಂಡ ನಾಲ್ಕೈದು ಜನರ ತಂಡ ಒಂದೊಂದು ವಿಭಾಗಕ್ಕೆ ತೆರಳಿ ಈಗಿನಿಂದಲೇ ಚುನಾವಣೆ ಪೂರ್ವ ತಯಾರಿ ನಡೆಸುತ್ತಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್​ ಸರ್ಕಾರ ಜಾತಿ-ಧರ್ಮಗಳ ಮಧ್ಯ ವಿಷ ಬೀಜ ಬಿತ್ತುವುದರಲ್ಲಿ ಕಾರ್ಯನಿರತರಾಗಿದ್ದಾರೆ.ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯಿಂದಾಗಿ ರಾಜ್ಯದಲ್ಲಿ ಬಡವರ, ರೈತ, ದಲಿತ, ಹಿಂದುಳಿದ ವರ್ಗ ಸೇರಿದಂತೆ ಎಲ್ಲಾ ಜನಸಾಮಾನ್ಯರಿಗೂ ಅನ್ಯಾಯವಾಗಿದೆ.ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸರ್ಕಾರ ಎಲ್ಲಾ ಇಲಾಖೆಗಳಿಗೆ ಗುರಿಯಾಗಿಸಿದೆ.

ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆಯುತ್ತಿಲ್ಲ.ಶಾಸಕರು ಅನುದಾನಕ್ಕೋಸ್ಕರ ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೆ ಬರೆ ಎಳೆಯುತ್ತಿದೆ. ಚುನಾವಣೆ ಎದುರಾದರೆ ಕಾಂಗ್ರೆಸ್ ಹೀನಾಯವಾಗಿ ಸೋಲೋದು ನಿಶ್ಚಿತ ಎಂದು ವರದಿ ಬಂದಿದೆ.

Comments (0)

Your email address will not be published. Required fields are marked *

Back to top button