ಫ್ರೀಡಂ ಟಿವಿ ಡೆಸ್ಕ್ :
ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮೂರು ಸ್ಥಾನಗಳನ್ನು ಬಿಟ್ಟುಕೊಡಲು ಮುಂದಾಗಿದೆ. ಆದರೆ ಜೆಡಿಎಸ್ ಕನಿಷ್ಠ 5 ಸ್ಥಾನಗಳ ಮೇಲೆ ಕಣ್ಣಿಟ್ಟಿದೆ. ಅಂತಿಮವಾಗಿ ನಾಲ್ಕು ಸ್ಥಾನಗಳಿಗೆ ಒಪ್ಪಂದವಾಗುವ ಸಾಧ್ಯತೆ ಇದೆ.
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಹೆಚ್.ಡಿ. ರೇವಣ್ಣ ಸೇರಿ ಜೆಡಿಎಸ್ ನಾಯಕರು ಭೇಟಿಯಾಗಿ ಚರ್ಚೆ ನಡೆಸಿದ್ರು. ಇದರ ಬೆನ್ನಲ್ಲೇ ಲೋಕಸಭೆಗೆ ಸೀಟು ಹಂಚಿಕೆ ವಿಚಾರವಾಗಿ ಚರ್ಚೆ ಜೋರಾಗಿದೆ.