Wednesday, January 28, 2026
27.9 C
Bengaluru
Google search engine
LIVE
ಮನೆ#Exclusive Newsಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಖಂಡಿಸಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಖಂಡಿಸಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ

ಬೆಳಗಾವಿ: ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಬಿಜೆಪಿ-ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿದರು, ಪಂಚಮಸಾಲಿ ಆಂದೋಲನದಲ್ಲಿ ಅವ್ಯವಹಾರ ನಡೆದಿದೆ ಹೀಗಾಗಿ ಸರಕಾರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಧರಣಿ ನಡೆಸಿದರು.

ಕಾಂಗ್ರೆಸ್ ಸರ್ಕಾರವು ವಾಕ್ ಸ್ವಾತಂತ್ರ್ಯ, ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದು ಲಿಂಗಾಯತ ವಿರೋಧಿ ಸರ್ಕಾರ ಎಂದು ಧಿಕ್ಕಾರ ಕೂಗಿದರು. ಪ್ರಜಾಪ್ರಭುತ್ವ ಧಮನ ಮಾಡುತ್ತಿದೆ, ಸರ್ವಾಧಿಕಾರ ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ, ಅಲ್ಪಸಂಖ್ಯಾತರಿಗೆ ಕೋಟಿ ಕೋಟಿ ಲಿಂಗಾಯತರಿಗೆ ಲಾಠಿ ಏಟು ಎಂಬ ಘೋಷಣೆಗಳೊಂದಿಗೆ ಶಾಸಕರು ಆಕ್ರೋಶ ಹೊರಹಾಕಿದರು.  ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರ ಪ್ರತಿಭಟನೆ ನಡೆಸಿದರು, ಪ್ರತಿಪಕ್ಷ ಸದಸ್ಯರು ಸದನದ ಬಾವಿಗೆ ಪ್ರವೇಶಿಸಿದರು.

ಆಂದೋಲನದ ಸಮಯದಲ್ಲಿ ಗಾಯಗೊಂಡವರು ಎಲ್ಲಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡುವಂತೆ ಒತ್ತಾಯಿಸಿ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಭಾನಾಯಕ ಬೋಸರಾಜು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮನವಿ ಮಾಡಿದರೂ ಅವರ ಗಲಾಟೆ ಮುಂದುವರಿದಿತ್ತು. ಗಾಯಾಳುಗಳ ಮಾಹಿತಿ ಕೇಳಿದಾಗ ಸದಸ್ಯರು ಮರುದಿನ ನೀಡುವುದಾಗಿ ತಿಳಿಸಿದರು. ಗದ್ದಲ ನಿಯಂತ್ರಣ ತಪ್ಪಿತು ಎಂದು ಕಾಂಗ್ರೆಸ್ ಸದಸ್ಯರು ಹೇಳಲು ಮುಂದಾದಾಗ, ಪ್ರತಿಪಕ್ಷದ ಸದಸ್ಯರು ಸರ್ಕಾರದಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ಕೆಲಕಾಲ ಮಾತಿನ ಚಕಮಕಿ ನಡೆಸಿದ ನಂತರ, ನಿಯಮ 72ರ ಅಡಿಯಲ್ಲಿ ಶುಕ್ರವಾರ ಚರ್ಚೆಗೆ ಸಮಯ ನಿಗದಿಪಡಿಸುವುದಾಗಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭರವಸೆ ನೀಡಿದ ನಂತರ ಸದಸ್ಯರು ಹಿಂಪಡೆದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments