Wednesday, December 10, 2025
26.8 C
Bengaluru
Google search engine
LIVE
ಮನೆಜಿಲ್ಲೆಕೊಲೆ ಯತ್ನ ಆರೋಪ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ

ಕೊಲೆ ಯತ್ನ ಆರೋಪ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು​​ ಕೊಲೆ ಯತ್ನ ಆರೋಪದಲ್ಲಿ ಪೊಲೀಸರು ತಡರಾತ್ರಿ ಬಂಧಿಸಿದ್ಧಾರೆ.

ಕೊಲೆಯತ್ನ ಆರೋಪದಡಿ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗ್ರಾಮದ ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಣಿಕಂಠ ರಾಠೋಡ್​ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ..ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಇರುವ ನಾಟಿ ಔಷಧಿ ವೈದ್ಯ ರಶೀದ್ ಮುತ್ಯಾ ಬಂಧನಕ್ಕೆ ಮಣಿಕಂಠ ರಾಠೋಡ್ ಆಗ್ರಹಿಸಿದ್ದರು.

ಮಣಿಕಂಠ ರಾಠೋಡ್, ಬೆಂಬಲಿಗರೊಂದಿಗೆ ಗ್ರಾಮಕ್ಕೆ ತೆರಳಿ ದೊಡ್ಡ ಹೈಡ್ರಾಮಾ ಕ್ರಿಯೇಟ್ ಮಾಡಿದ್ದರು. ಈ ವೇಳೆ ರಶೀದ್ ಮತ್ಯಾ ಕಾರು ಚಾಲಕನ ತಲೆಗೆ ಕಲ್ಲೇಟು ಬಿದ್ದಿತ್ತು. ರಶೀದ್ ಮುತ್ಯಾ ಚಾಲಕನ ದೂರಿನ ಮೇರೆಗೆ ಬಂಧನವಾಗಿದೆ. ಮಣಿಕಂಠ್ ರಾಠೋಡ್ ವಿರುದ್ಧ ಕೊಲೆಯತ್ನ ಆರೋಪದಡಿ ದೂರು ದಾಖಲಾಗಿದೆ. ನೆಲೋಗಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments