ನವದೆಹಲಿ: ಮುಂದಿನ ವರ್ಷ ಫೆಬ್ರವರಿ ಅಂತ್ಯದ ವೇಳೆಗೆ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಈಗ ನಡೆಯುತ್ತಿರುವ ಕೇಸರಿ ಪಕ್ಷದ ಸಾಂಸ್ಥಿಕ ಚುನಾವಣೆಯು ಜನವರಿ ಮಧ್ಯದ ವೇಳೆಗೆ ಅರ್ಧಕ್ಕಿಂತ ಹೆಚ್ಚು ರಾಜ್ಯ ಘಟಕಗಳಲ್ಲಿ ಮತದಾನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದು ಪಕ್ಷದ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡುತ್ತದೆ.

ಬಿಜೆಪಿಯ ಸುಮಾರು ಶೇ. 60 ರಷ್ಟು ರಾಜ್ಯ ಘಟಕದ ಅಧ್ಯಕ್ಷರ ಅಧಿಕಾರಾವಧಿ ಮುಗಿದಿದ್ದು, ಮುಂದಿನ ತಿಂಗಳು ರಾಜ್ಯ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆಯಿದೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಬಿಜೆಪಿಯ ಸಂವಿಧಾನವು ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗುವ ಮುನ್ನ, ಕನಿಷ್ಠ ಅರ್ಧದಷ್ಟು ರಾಜ್ಯ ಘಟಕಗಳಲ್ಲಿ ಸಾಂಸ್ಥಿಕ ಚುನಾವಣೆಗಳನ್ನು ಪೂರ್ಣಗೊಳಿಸಬೇಕು ಎಂಬ ಷರತ್ತು ವಿಧಿಸಲಾಗಿದೆ.

“ಫೆಬ್ರವರಿ ಅಂತ್ಯದ ವೇಳೆಗೆ ಹೊಸ ಬಿಜೆಪಿ ಅಧ್ಯಕ್ಷರು ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ” ಎಂದು  ತಿಳಿಸಿದ್ದಾರೆ.

ಬಿಜೆಪಿಯ ನೂತನ ಅಧ್ಯಕ್ಷರು ಪ್ರಸ್ತುತ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಯಾಗಬಹುದೇ ಎಂಬ ಪ್ರಶ್ನೆಗೆ, ಅದು ಸರ್ಕಾರದಿಂದ ಆಗಿರಬಹುದು ಅಥವಾ ಸಂಘಟನೆಯಿಂದ ಆಗಿರಬಹುದು, ಇನ್ನೂ ಯಾವುದನ್ನೂ ಅಂತಿಮಗೊಳಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ.

 

 

Leave a Reply

Your email address will not be published. Required fields are marked *

Verified by MonsterInsights