Wednesday, April 30, 2025
32 C
Bengaluru
LIVE
ಮನೆUncategorizedಲೋಕಸಭೆ ಚುನಾವಣೆಯಲ್ಲಿ ರಾಘವೇಂದ್ರರನ್ನು ಗೆಲ್ಲಿಸಲು ಕರೆ

ಲೋಕಸಭೆ ಚುನಾವಣೆಯಲ್ಲಿ ರಾಘವೇಂದ್ರರನ್ನು ಗೆಲ್ಲಿಸಲು ಕರೆ

ಶಿವಮೊಗ್ಗ : ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ, ಮುಂದೆಯೂ ಇವರನ್ನು ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿರುವ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅಭಿಪ್ರಾಯಪಟ್ಟರು.

ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಬಿ.ವೈ.ರಾಘವೇಂದ್ರ ಅವರಂತಹ ಲೋಕಸಭೆ ಸದಸ್ಯರನ್ನುಪಡೆದ ನೀವೇ ಧನ್ಯರು. ಜಿಲ್ಲೆಯಲ್ಲಿ ಆಗಬೇಕಿರುವ ಎಲ್ಲ ಕೆಲಸಗಳನ್ನು ಪೂರ್ಣ ಮಾಡಿ ಮುನ್ನಡೆಯುತ್ತಿದ್ದಾರೆ. ಜನರಿಗೆ ಅಭಿವೃದ್ಧಿ ಕೆಲಸ ಆಗಬೇಕಿರುವುದು ಮೊದಲ ಆದ್ಯತೆ. ಜನರ ಅಭಿಲಾಷೆಯಂತೆ ಕೆಲಸ ಮಾಡಿರುವ ಲೋಕಸಭಾ ಸದಸ್ಯರನ್ನು ಬರುವ ಲೋಕಸಭೆ ಚುನಾವಣೆಯಲ್ಲಿಯೂ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ವೀರಶೈವ ಲಿಂಗಾಯತರಲ್ಲಿ ಅನೇಕ ಒಳ ಪಂಗಡಗಳಿವೆ, ಅವುಗಳು ದೂರವಾಗಿ ಎಲ್ಲರೂ ಒಂದೇ ಎಂಬ ಭಾವನೆ ಬರಬೇಕು ಆಗ ಐಕ್ಯತೆ ಮೂಡುತ್ತದೆ ಎಂದರು

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments