Sunday, February 22, 2026
31 C
Bengaluru
Google search engine
LIVE
ಮನೆ#Exclusive NewsTop Newsಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

ಗದಗ:5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್-ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಅಧಿಕಾರಿಗಳು ಶಾಸಕರನ್ನು ಬಂಧಿಸಿ ಕರೆದೊಯ್ಯುವಾಗ ಲಕ್ಷ್ಮೇಶ್ವರದಲ್ಲಿ ಹೈಡ್ರಾಮಾ ನಡೆದಿದೆ. ಶಾಸಕರ ಬೆಂಬಲಿಗರು ಲೋಕಾಯುಕ್ತ ವಾಹನವನ್ನು ಅಡ್ಡಗಟ್ಟಿ ತಡೆಯಲು ಯತ್ನಿಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಘಟನೆಯ ಕುರಿತು ಶಾಸಕ ಚಂದ್ರು ಲಮಾಣಿ ಅವರ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದು ಸದ್ಯ ಶಾಸಕರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗಾಗಿ ಕರೆದೊಯ್ದಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments