#Exclusive NewsTop Newsದೇಶ/ವಿದೇಶರಾಜಕೀಯಸುದ್ದಿ

ದಕ್ಷಿಣ ಭಾರತದ ಮಹಿಳೆಗೆ ಒಲಿಯುತ್ತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ?

ನವದೆಹಲಿ: ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿದು ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಇದೀಗ ಮಾರ್ಚ್  16ರ ಒಳಗಾಗಿ ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರನ್ನು ಘೋಷಿಸಲಿದೆ.

ಬಿಜೆಪಿಯ ಆಂತರಿಕ ಮಾಹಿತಿಯ ಪ್ರಕಾರ, ಪಕ್ಷವು ಈ ಉನ್ನತ ಹುದ್ದೆಗೆ ಮಹಿಳೆಯನ್ನು ನೇಮಿಸುವ ಗುರಿಯನ್ನು ಹೊಂದಿದ್ದು, ಹೆಚ್ಚಾಗಿ, ದಕ್ಷಿಣ ಭಾರತದ ಮಹಿಳೆಯನ್ನು ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನೇಮಿಸುವ ಇಚ್ಚೆಯನ್ನು ಆರ್ ಎಸ್ ಎಸ್ ಹಾಗೂ ಬಿಜೆಪಿಯ ವರಿಷ್ಠರು ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಹಾಗೇನಾದರೂ, ದಕ್ಷಿಣ ಭಾರತದ ಮಹಿಳೆಯನ್ನು ಈ ಸ್ಥಾನಕ್ಕೆ ಆಯ್ಕೆ ಮಾಡುವುದಿದ್ದರೆ, ಆಂಧ್ರ ಪ್ರದೇಶದ ಬಿಜೆಪಿ ಮುಖ್ಯಸ್ಥೆ ದಗ್ಗುಬಾಟಿ ಪುರಂದೇಶ್ವರಿ ಅಥವಾ ಬಿಜೆಪಿ ಮಹಿಳಾ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷೆ ಮತ್ತು ಕೊಯಮತ್ತೂರು ಶಾಸಕಿ ವಾನತಿ ಶ್ರೀನಿವಾಸನ್ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷನ್ನಾಗಿ ನೇಮಿಸಲಿದ್ದಾರೆ ಎಂದು ವರದಿ ಹೇಳಿದೆ.

Comments (0)

Your email address will not be published. Required fields are marked *

Back to top button