ರಾಜಕೀಯ
ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಧಾರವಾಡದಲ್ಲಿ ಬಿಜೆಪಿ ಪ್ರೊಟೆಸ್ಟ್!
BJP protests in Dharwad demanding the resignation of Minister B. Nagendra!

ಧಾರವಾಡ : ವಾಲ್ಮೀಕಿ ನಿಗಮದ ಹಣ ಲೂಟಿ ಆರೋಪ ಹೊತ್ತಿರುವ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸಚಿವ ಬಿ. ನಾಗೇಂದ್ರ ಅವರು ತಕ್ಷಣವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ BJP ಮುಖಂಡರು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರೊಟೆಸ್ಟ್ ನಡೆಸುತ್ತಿದ್ದು, ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಸಿಎಂ ಡಿಕೆಶಿ ಸಚಿವ ಸಂಪುಟದಿಂದ ಬಿ. ನಾಗೇಂದ್ರ ಅವರನ್ನು ಕೈಬಿಡಬೇಕೆಂದು ಒತ್ತಾಯಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ವಿಧಾನ ಪರಿಷತ್ ಕಲಾಪದಲ್ಲೂ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸಿ ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದರು.




