Wednesday, January 28, 2026
20.3 C
Bengaluru
Google search engine
LIVE
ಮನೆರಾಜಕೀಯ22ರಂದು ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ: ಸುನೀಲ್‍ಕುಮಾರ್

22ರಂದು ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ: ಸುನೀಲ್‍ಕುಮಾರ್

ಬೆಂಗಳೂರು: ಘನತೆವೆತ್ತ ರಾಜ್ಯಪಾರಿಗೆ ಅವಮಾನ ಮಾಡಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ಹಾಗೂ ಹಗರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಾಳೆ (ಆ.22) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ಅವರು ತಿಳಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ. ರಾಜ್ಯ ಕೋರ್ ಕಮಿಟಿ ಸದಸ್ಯರು, ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ ಸಂದರ್ಭದಲ್ಲಿ ಮಾನ್ಯ ರಾಜ್ಯಪಾಲರ ಭಾವಚಿತ್ರಕ್ಕೆ ಅವಮಾನ ಮಾಡಿದ್ದಾರೆ. ಅಲ್ಲದೆ, ಕೆಲವೆಡೆ ಭಾವಚಿತ್ರವನ್ನು ದಹಿಸಲಾಗಿದೆ. ಇದಲ್ಲದೆ, ಸಚಿವರಾದ ಜಮೀರ್ ಅಹ್ಮದ್, ಕೃಷ್ಣಬೈರೇಗೌಡ, ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜ ಮೊದಲಾದವರು ರಾಜ್ಯಪಾಲರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದಾರೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರು ಪ್ರಧಾನಿಯವರ ವಿರುದ್ಧ ಆಕ್ಷೇಪಾರ್ಹ ಮಾತನಾಡಿದ್ದಾರೆ. ಹಿಂಸೆಗೆ ಪ್ರಚೋದಿಸುವ ಹೇಳಿಕೆಗಳನ್ನು ಕಾಂಗ್ರೆಸ್ಸಿಗರು ನೀಡುತ್ತಿದ್ದು, ಇದರ ವಿರುದ್ಧ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments