Tuesday, January 27, 2026
24 C
Bengaluru
Google search engine
LIVE
ಮನೆ#Exclusive NewsTop Newsಬಜೆಟ್ ಅಧಿವೇಶನದ ಮೊದಲ ದಿನವೇ ಬಿಜೆಪಿ ಪ್ರತಿಭಟನೆ..!

ಬಜೆಟ್ ಅಧಿವೇಶನದ ಮೊದಲ ದಿನವೇ ಬಿಜೆಪಿ ಪ್ರತಿಭಟನೆ..!

ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಈ ಹಿನ್ನಲೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ರಿಗೆ ಅಗೌರವ ತೋರಿರುವ ಆಡಳಿತ ಪಕ್ಷದ ವಿರದ್ದ ಪ್ರತಿಭಟನೆ ನಡೆಸಲಿದ್ದೇವೆ ಅಂತ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದಿನನಿತ್ಯ ರಾಜ್ಯಪಾಲರನ್ನು ಅವಮಾನಿಸುವ ಮತ್ತು ರಾಜ್ಯಪಾಲರ ಸಂವಿಧಾನದತ್ತ ಅಧಿಕಾರವನ್ನು ಕಸಿದುಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ. ಕಾಂಗ್ರೆಸ್ ಸರ್ಕಾರ ಒಂದು ಕಡೆ ರಾಜ್ಯಪಾಲರನ್ನು ಅವಮಾನಿಸುತ್ತದೆ ಮತ್ತೊಂದು ಕಡೆ ಕಾಡಿಬೇಡಿ ಅವರಿಂದ ಉತ್ತಮ‌ ಸರ್ಕಾರ ಎಂದು ಹೊಗಳಿಸಿಕೊಳ್ಳುತ್ತಿದೆ. ರಾಜ್ಯಪಾಲರು ಹಾಗೂ ರಾಜಭವನಕ್ಕೆ ಅಪಮಾನ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ ಬೆಳಗ್ಗೆ ಶಾಸಕರ ಭವನದಿಂದ ವಿಧಾನ ಸೌಧದವರೆಗೆ ಪಾದಯಾತ್ರೆ ಮಾಡಲಿದ್ದೇವೆ. ನಾಳೆ ರಾಜ್ಯಪಾಲರನ್ನು ಕಾಡಿಬೇಡಿ ಭಾಷಣ ಮಾಡಿಸುತ್ತಾ ಇದ್ದೀರ. ಯಾವ ಮುಖ ಇಟ್ಟುಕೊಂಡು ಕಾಂಗ್ರೆಸ್ ಅವರು ಭಾಷಣ ಮಾಡಿಸುತ್ತಾ ಇದ್ದೀರಾ? ಇದರ ವಿರುದ್ಧ ನಾವು ಪ್ರತಿಭಟನೆ ಮಾಡ್ತಾ ಇದ್ದೇವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಎಲ್ಲಾ ಶಾಸಕರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಭಾಗವಹಿಸಲಿದ್ದಾರೆ ಎಂದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments