ಬಿಜೆಪಿ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ – ರಾಮಲಿಂಗಾರೆಡ್ಡಿ ಆಕ್ರೋಶ

ಹೊಸಕೋಟೆ: ಅವಿಮುಕ್ತೇಶ್ವರಸ್ವಾಮಿ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ಸದಸ್ಯರೊಬ್ಬರನ್ನು ನೇಮಿಸಿರುವ ಕುರಿತು ಬಿಜೆಪಿ ಅನಗತ್ಯ ವಿವಾದ ಸೃಷ್ಟಿಸುತ್ತಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಟ್ವೀಟ್ ಮಾಡಿದ್ದಾರೆ . ವಿವಾದದ ಕುರಿತು ಬಿಜೆಪಿ ಅಪಪ್ರಚಾರಕ್ಕೆ ಇಳಿದಿದೆ ಎಂದು ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ .
ಆದರೆ ವಾಸ್ತವದಲ್ಲಿ ಸಮಿತಿಯಲ್ಲಿ ಸರ್ವ ಸಮುದಾಯದ ಸದಸ್ಯರನ್ನು ನೇಮಕಗೊಳಿಸುವುದು ದೇಗುಲದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಸಹ ಅಂದಿನ ಸಚಿವರಾಗಿದ್ದ ಶ್ರೀ ಎಮ್ ಟಿವಿ ನಾಗರಾಜ್ ಅವರು 2022 ನೇ ಸಾಲಿನ ಶ್ರೀ ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಅಫ್ಸರ್ ಎಂಬುವವರನ್ನು ಸದಸ್ಯರನ್ನಾಗಿ ಮಾಡಿದ್ದರು.

2020-21ನೇ ಸಾಲಿನ ಸಮಿತಿಯಲ್ಲಿ ಸಹ ಇದೇ ಬಿಜೆಪಿಯವರು ಇಮ್ತಿಯಾಜ್ ಪಾಷಾ ಎಂಬುವವರು ಸದಸ್ಯರನ್ನಾಗಿ ಮಾಡಿದ್ದನ್ನು ಮರೆತಂತಿದೆ.
ಹಿಂದಿನ ಅವಧಿಯ ಎಲ್ಲ ಪಟ್ಟಿಗಳನ್ನು ಬಿಜೆಪಿ ತೆರೆದು ನೋಡಿ ಸ್ವಲ್ಪವಾದರೂ ವಿವೇಕದಿಂದ ವರ್ತಿಸಿದರೆ ಉತ್ತಮ ಎಂದು ರಾಮಲಿಂಗಾರೆಡ್ಡಿ ಬಿಜೆಪಿಯನ್ನು ಕುಟುಕಿದ್ದಾರೆ.
ಅನ್ಯಧರ್ಮಿಯರ ಬಗ್ಗೆ ದ್ವೇಷವನ್ನು ಬಿತ್ತಿ ಅವರ ವಿರುದ್ಧ ಹಿಂದೂ ಸಮುದಾಯವನ್ನು ಎತ್ತಿಕಟ್ಟುವ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ರಣಹದ್ದುಗಳಂತೆ ಸದಾ ಹಪಹಪಿಸುವ ಬಿಜೆಪಿಗರು ಸುಳ್ಳು ಮಾಹಿತಿಗಳನ್ನು ಹಂಚಿಕೊಳ್ಳುತ್ತ ಬಿಜೆಪಿ ಸಾಮಾಜಿಕ ಸ್ವಾಸ್ಥ್ಯ ವನ್ನು ಹಾಳು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ಮೊಸರಲ್ಲಿ ಕಲ್ಲು ಹುಡುಕುವ ಬುದ್ಧಿಯನ್ನು ಯಾವಾಗ ನಿಲ್ಲಿಸುತ್ತೀರಿ? ಎಂದು ರಾಮಲಿಂಗಾರೆಡ್ಡಿ ಬಿಜೆಪಿ ಯನ್ನು ಪ್ರಶ್ನಿಸಿದ್ದಾರೆ..ಬಿಜೆಪಿ ತನ್ನ ವೆಬ್ ಪೇಜ್ ನಲ್ಲಿ ನವಾಜ್ ಎಂಬವರನ್ನು ದೇವಾಲಯ ಸಮಿತಿಯಲ್ಲಿ ಕಾಂಗ್ರೆಸ್ ನೇಮಕ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು ..
https://x.com/rlr_btm/status/1788117200676758011?s=46&t=9E85lAUU3X0e9lBlPt81WQ




