Saturday, September 13, 2025
27.2 C
Bengaluru
Google search engine
LIVE
ಮನೆ#Exclusive Newsಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ : ಚುನಾವಣಾಧಿಕಾರಿಗಳ ನೇಮಕ

ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ : ಚುನಾವಣಾಧಿಕಾರಿಗಳ ನೇಮಕ

ಬೆಂಗಳೂರು : ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಂಬರುವ ರಾಜ್ಯ ಅಧ್ಯಕ್ಷರು ಮತ್ತು ರಾಷ್ಟ್ರೀಯ ಪರಿಷತ್ ಸದಸ್ಯರ ಚುನಾವಣೆಗೆ ಗುರುವಾರ ಚುನಾವಣಾ ಅಧಿಕಾರಿಗಳನ್ನು ಘೋಷಿಸಿದೆ .ಕರ್ನಾಟಕದಲ್ಲಿ ಬಿಜೆಪಿ ಅಧ್ಯಕ್ಷರ ಕುರ್ಚಿ ಅಲುಗಾಡುತ್ತಿದೆ ಎಂಬ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಲೇ ಇತ್ತು. ಈ ನಡುವೆ ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆಗಾಗಿ ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಿ ಬಿಜೆಪಿ ಆದೇಶ ಹೊರಡಿಸಿದೆ. ಕರ್ನಾಟಕಕ್ಕೆ ಚುನಾವಣಾಧಿಕಾರಿಯಾಗಿ ಶಿವರಾಜ್‌ಸಿಂಗ್ ಚೌಹಾಣ್ ಅವರನ್ನು ನೇಮಕ ಮಾಡಲಾಗಿದೆ. ಹೀಗಾಗಿ, ಕರ್ನಾಟಕದಲ್ಲಿ ಹೊಸ ಅಧ್ಯಕ್ಷರ ನೇಮಕವಾಗುವ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ.

ಕರ್ನಾಟಕ,ಆಂಧ್ರಪ್ರದೇಶಕ್ಕೆ ಚುನಾವಣಾ ಅಧಿಕಾರಿಯಾಗಿ ಪಿ.ಸಿ. ಮೋಹನ್ ಅವರನ್ನು ನೇಮಕ ಮಾಡಲಾಗಿದೆ. ತೆಲಂಗಾಣಕ್ಕೆ ಚುನಾವಣಾ ಅಧಿಕಾರಿಯಾಗಿ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ. ಭಾರತದ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ನಡೆಯಲಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments