ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ ಪ್ರಕರಣ ಸಂಬಂಧ ಸಚಿವ ಸ್ಥಾನದಿಂದ ನಾಗೇಂದ್ರ ವಜಾಗೊಳಿಸುವಂತೆ ಒತ್ತಾಯಿಸಿ ಇಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಕೆ ಮಾಡಲಿದೆ. ಈ ಮೂಲಕ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಒತ್ತಡ ಹಾಕಿದ್ದರು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ಬಗ್ಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕರಾದ ಮಾನ್ಯ ಆರ್. ಅಶೋಕ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರನೇತೃತ್ವದಲ್ಲಿ ಶಾಸಕರುಗಳಾದ ಮಾನ್ಯ ಕೆ .ಗೋಪಾಲಯ್ಯ , ಅಶ್ವಥ್ ನಾರಾಯಣ, ಬೈರತಿ ಬಸವರಾಜ್ , ರವಿಕುಮಾರ್ ,ಹಾಗೂ ಸಪ್ತಗಿರಿ ಗೌಡ,ಪ್ರಮುಖ ಮುಖಂಡರ ನಿಯೋಗ ವಿಧಾನಸೌಧದಿಂದ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ಸಲ್ಲಿಸಿ ಮಧ್ಯಪ್ರವೇಶಕ್ಕೆ ಆಗ್ರಹಿಸಿದರು.

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com


