ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ನಡೆದ ಇತ್ತಿಚಿನ ಬೆಳವಣಿಗೆಗಳನ್ನು ಖಂಡಿಸಿ ಕೊಪ್ಪಳ ಬಿಜೆಪಿ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರದಿಂದ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಿರುವ ವಿಚಾರ ಹಾಗೂ ಬಿಜೆಪಿಯ 18 ಶಾಸಕರನ್ನು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅಮಾನತು ಮಾಡಿರುವುದನ್ನು ಖಂಡಿಸಿ ಪ್ರತಿಭಟಿಸಲಾಯಿತು.
ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷ ಬಸವರಾಜ್ ದಡೇಸೂಗೂರು, ಎಂಎಲ್ಸಿ ಹೇಮಲತಾ ನಾಯಕ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.


