Top Newsದೇಶ/ವಿದೇಶರಾಜಕೀಯಸುದ್ದಿ

ಹಿಂದೂಗಳ ಮೇಲಿನ ದಾಳಿ ಖಂಡಿಸಿ ಅಮಿತ್ ಶಾಗೆ ಬಿಜೆಪಿ ಪತ್ರ

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ನಿರಂತರ ದಾಳಿ ಹಾಗೂ ಹತ್ಯೆ ಪ್ರಕರಣಗಳನ್ನು ಖಂಡಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೂರು ನೀಡಲು ರಾಜ್ಯ ಬಿಜೆಪಿ ಸಜ್ಜಾಗಿದೆ.

‘ಕೈ’ ಆಡಳಿತದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂಬ ಗಂಭೀರ ಆರೋಪ ಮಾಡಿರುವ ಬಿಜೆಪಿ ನಾಯಕರು, ಪತ್ರದ ಮೂಲಕ ಕೇಂದ್ರದ ಹಸ್ತಕ್ಷೇಪಕ್ಕೆ ಮನವಿ ಮಾಡಲು ನಿರ್ಧರಿಸಿದ್ದಾರೆ. ಪ್ರಮುಖವಾಗಿ ಶಿವಮೊಗ್ಗದಲ್ಲಿ ನಡೆದ ಅಪ್ರಾಪ್ತ ಹಿಂದೂ ಯುವಕನ ಬರ್ಬರ ಕೊಲೆ ಹಾಗೂ ಕೊಡಗು ಜಿಲ್ಲೆಯ ಬಲ್ಲಮಾವಟಿಯ ಯುವಕ ಗೌತಮ್ ಹತ್ಯೆ ಪ್ರಕರಣಗಳನ್ನು ದೂರಿನಲ್ಲಿ ಪ್ರಸ್ತಾಪಿಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ದೂರಲಿದ್ದಾರೆ.

ಕೇವಲ ಹತ್ಯೆಗಳಲ್ಲದೆ, ಮಡಿಕೇರಿ ಮತ್ತು ಬಾಗಲಕೋಟೆಯಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮಗಳ ಮೇಲೆ ನಡೆದ ದಾಳಿ ಹಾಗೂ ಗಲಾಟೆಗಳ ಕುರಿತು ಸಮಗ್ರ ಮಾಹಿತಿಯನ್ನು ಕೇಂದ್ರ ಗೃಹ ಸಚಿವರಿಗೆ ರವಾನಿಸಲು ಬಿಜೆಪಿ ಪ್ಲ್ಯಾನ್ ಮಾಡಿದೆ. ಹಿಂದೂಗಳ ರಕ್ಷಣೆಗಾಗಿ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಿರುವ ಬಿಜೆಪಿ, ಈ ಮೂಲಕ ರಾಜ್ಯದಲ್ಲಿ ಹಿಂದೂಗಳ ಪರವಾಗಿ ತಾವಿದ್ದೇವೆ ಎಂಬ ಬಲವಾದ ಸಂದೇಶ ರವಾನಿಸಲು ಮುಂದಾಗಿದೆ. ಈ ಪತ್ರ ಸಮರದ ಹಿಂದೆ ಹಿಂದೂ ಮತ ಬ್ಯಾಂಕ್ ಸೆಳೆಯುವ ರಾಜಕೀಯ ತಂತ್ರಗಾರಿಕೆಯೂ ಅಡಗಿದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

Comments (0)

Your email address will not be published. Required fields are marked *

Back to top button