ಬೆಂಗಳೂರು : ಅತ್ತ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ 15ನೇ ದಾಖಲೆ ಬಜೆಟ್ ಮಂಡಿಸುತ್ತಿದ್ರೆ, ಇತ್ತ ವಿಪಕ್ಷದಲ್ಲಿರೋ ಬಿಜೆಪಿ ಟ್ವೀಟ್ ಮೂಲಕ ಸಿದ್ದರಾಮಯ್ಯರ ಬಜೆಟ್ಟನ್ನ ಅಣಕಿಸುತ್ತಿದೆ. ಬಿಜೆಪಿ ಶಾಸಕರು ಇಂದು ಬೆಳಿಗ್ಗೆಯಿಂದಲೇ ಬಜೆಟ್ ಮಂಡನೆ ವೇಳೆ ಆಕ್ರೋಶ ವ್ಯಕ್ತಪಡಿಸಿದ್ರು. ಇದಕ್ಕೆ ಕಾರಣ ಬಜೆಟ್ ಭಾಷಣದ ವೇಳೆ ಕೇಂದ್ರದ ವಿರುದ್ದ ಬೊಟ್ಟು ಮಾಡಿದ್ದರಿಂದ ಟ್ವೀಟಾಸ್ತ್ರ ಪ್ರಯೋಗಿಸಿ ಟಾಂಗ್ ನೀಡಿದ್ದಾರೆ.
ಸಾಲ- ಶೂಲದ ಹರಿಕಾರ ಸಾಲರಾಮಯ್ಯ ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಎಂದು ಟ್ವೀಟ್ ನಲ್ಲಿ ಕಿಡಿಕಾರಿದ್ದಾರೆ. ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ. ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ ₹1,93,246 ಕೋಟಿ ಸಾಲ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ ₹28 ಸಾವಿರ ಸಾಲ ಹೇರಿದ್ದಾರೆ.
https://x.com/BJP4Karnataka/status/1758391470854443444?s=20
ಸಾಲರಾಮಯ್ಯನವರು ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ. ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ ಎಂದು ಟ್ವೀಟ್ ಮಾಡಿದ್ದಾರೆ.