Thursday, November 20, 2025
22.5 C
Bengaluru
Google search engine
LIVE
ಮನೆರಾಜಕೀಯBMTC ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು

BMTC ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು

ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತುಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿಗಾಗಿ ನಿರೀಕ್ಷಣೆಯಲ್ಲಿದ್ದ ಮೃತಾವಲಂಭಿತ ಅಭ್ಯರ್ಥಿಗಳ ಪೈಕಿ ಅರ್ಹತೆಯನುಸಾರ ಹಾಗೂ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಸುಮಾರು 250 ಮೃತಾವಲಂಭಿತರುಗಳನ್ನು ಕಳೆದ ಅಕ್ಟೋಬರ್ -2023 ಮತ್ತು ಮಾರ್ಚ್-2024 ರಲ್ಲಿ ದರ್ಜೆ-3 (ಮೇಲ್ವಿಚಾರಕೇತರ) ಮತ್ತು ದರ್ಜೆ-4ರ ಖಾಲಿ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಪ್ರಸ್ತುತ ಖಾಲಿ ಇರುವ ಕ.ರಾ.ಸಾ. ಪೇದೆ, ತಾಂತ್ರಿಕ ಸಹಾಯಕ ಮತ್ತು ಸಹಾಯಕ (ಕಛೇರಿ) ಒಟ್ಟು 48 ಹುದ್ದೆಗಳಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.  ಈ ಸಂದರ್ಭದಲ್ಲಿ ಬೆ.ಮ.ಸಾ.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಮಚಂದ್ರನ್.ಅರ್, ಭಾ.ಆ.ಸೇ., ನಿರ್ದೇಶಕರು (ಮಾತo) ರವರಾದ ಶ್ರೀಮತಿ ಶಿಲ್ಪ ಎಂ, ಭಾ.ಆ.ಸೇ, ಶ್ರೀ ವೈ.ದೇವರಾಜು, ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಮತ್ತು ಸಂಸ್ಥೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments