ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಿಲ್ಲರ್ ಬಿಎಂಟಿಸಿಯ ಬಳಿಕ ಕೆಎಸ್‌ಆರ್‌ಟಿಸಿಯ ಸರದಿ ಆರಂಭವಾಗಿದೆ. ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ KSRTC ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ.
ರಸ್ತೆಯ ಎಡಬದಿಯಲ್ಲಿ ಬರ್ತಿದ್ದ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಹಿಂಬದಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ತಲೆ ಮೇಲೆ ಬಸ್ ಹರಿದ ಪರಿಣಾಮ ರಾಜೇಂದ್ರ ಎಂಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತಪಟ್ಟ ಬೈಕ್ ಸವಾರನನ್ನು 45 ವರ್ಷದ ನಾಗಸಂದ್ರ ಏರಿಯಾದ ರಾಜೇಂದ್ರ ಎಂದು ಗುರುತಿಸಲಾಗಿದೆ. ಯಶವಂತಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.