ದಾವಣಗೆರೆ: ಟೈರ್ ಸ್ಫೋಟಗೊಂಡ ಪರಿಣಾಮ ಬೋಲೆರೋ ವಾಹನ ಪಲ್ಟಿಯಾಗಿದ್ದು, ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ವಾಹನದಲ್ಲಿದ್ದ 6 ಮಂದಿಗೆ ಗಾಯವಾಗಿರುವ ದುರ್ಘಟನೆ ದಾವಣಗೆರೆ ಹೊರವಲಯದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ತಡರಾತ್ರಿ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಬೋಲೆರೋ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮೃತಪಟ್ಟವರೆಲ್ಲರೂ ಆಂಧ್ರ ಮೂಲದವರಾಗಿದ್ದಾರೆ. ಐವರು ಗಾಯಾಳುಗಳನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ವ್ಯಕ್ತಿ ಗಂಭೀರ ಸ್ಥಿತಿಯಲ್ಲಿದ್ದು ಆತನನ್ನು ಹುಬ್ಬಳ್ಳಿಗೆ ರವಾನಿಸಲಾಗಿದೆ.
ಆಂಧ್ರ ಮೂಲದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಸಿಂಗರಾಜನಹಳ್ಳಿ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಹಾವೇರಿ ಜಿಲ್ಲೆ ಬ್ಯಾಡಿಗೆಯಿಂದ ಮೆಣಸಿನಕಾಯಿ ಖರೀದಿಗೆ ತೆರಳಿ ವಾಪಸ್ ಬರುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ . ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸು ಸ್ಥಳಕ್ಕೆ ತೆರೆಳ ಮೃತ ಪಟ್ಟ ವರನ್ನ ಜಿಲ್ಲಾ ಆಸ್ಪತ್ರೆ ಗೆ ರವಾನಿಸಿ ವಾಹನ ತೆರವು ಗೊಳಿಸಿದರು.